ಬೆಂಗಳೂರು: ವಿಧಾನ ಪರಿಷತ್‌ಗೆ (Karnataka Legislative Council) ಯಾರು ನಾಮನಿರ್ದೇಶನಗೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ವಿಧಾನ ಪರಿಷತ್‌ಗೆ ನಾಲ್ಕು ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್ಐ ಸೆಲ್ ಮುಖ್ಯಸ್ಥೆ ಆರತಿ ಕೃಷ್ಣ, ಹುಬ್ಬಳ್ಳಿ ಧಾರವಾಡ ದಲಿತ ಮುಖಂಡ ಜಕ್ಕಪ್ಪನವರ್ ಹಾಗೂ ಮೈಸೂರು ಮೂಲದ ಪತ್ರಕರ್ತ ಶಿವಕುಮಾರ್ ಹೆಸರು ಫೈನಲ್ ಆಗಿದೆ ಎಂದು ತಿಳಿದುಬಂದಿದೆ.
ಈ ಹಿಂದಿನ ಪಟ್ಟಿಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಿ.ಜಿ.ಸಾಗರ್ ಹೆಸರಿತ್ತು. ಆದರೆ, ಇದಕ್ಕೆ ರಾಜ್ಯ ಕಾಂಗ್ರೆಸ್ನ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಇಬ್ಬರನ್ನು ಪಟ್ಟಿಯಿಂದ ಹೈಕಮಾಂಡ್ ಕೈಬಿಟ್ಟಿದೆ. ಇದೀಗ ಪರಿಷ್ಕೃತ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ | CM Siddaramaiah: ಎಸ್‌ಸಿ-ಎಸ್‌ಟಿ ಜನರ ಮೇಲಿನ ದೌರ್ಜನ್ಯ ಪ್ರಕರಣ; 60 ದಿನದೊಳಗೆ ಆರೋಪ ಪಟ್ಟಿ ಸಲ್ಲಿಸಲು ಸಿಎಂ ಸೂಚನೆ
ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್, ಕೆ.ಎ.ತಿಪ್ಪೇಸ್ವಾಮಿ, ಸಿ.ಪಿ.ಯೋಗೇಶ್ವರ ತೆರವಾದ ಸ್ಥಾನಕ್ಕೆ ಹೊಸ ನಾಲ್ವರು ಅಭ್ಯರ್ಥಿಗಳನ್ನು ನಾಮನಿರ್ದೇಶಿಸಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.