ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ನನ್ನ ವಿರುದ್ಧ ಸುಳ್ಳು ಆರೋಪ, ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ನಟಿ ರನ್ಯಾ ರಾವ್‌ ದೂರು

Actress Ranya Rao: ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಅಧಿಕಾರಿಗಳು ಹಲ್ಲೆ ನಡೆಸಿದರಾ ಎಂದು ನ್ಯಾಯಾಧೀಶರು ಕೇಳಿದಾಗ, ನಟಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ, ಇದೀಗ ಅಧಿಕಾರಿಗಳು ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾರೆ.

ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ರನ್ಯಾ ರಾವ್‌ ದೂರು

Profile Prabhakara R Mar 15, 2025 5:28 PM

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (gold smuggling case) ವಿಚಾರಣೆ ವೇಳೆ ತನಗೆ ಚಿತ್ರಹಿಂಸೆ ನೀಡಲಾಗಿದ್ದು, ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ನಟಿ ರನ್ಯಾ ರಾವ್ (Actress Ranya Rao) ಆರೋಪಿಸಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ರನ್ಯಾ ರಾವ್‌ ದೂರು ನೀಡಿದ್ದು, ಅಷ್ಟಕ್ಕೂ ನನ್ನನ್ನು ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಬಂಧಿಸಿಲ್ಲ, ದುಬೈನಿಂದ ಬರುವಾಗ ವಿಮಾನದಲ್ಲೇ ನೇರವಾಗಿ ಬಂಧಿಸಲಾಗಿದೆ ಎಂದು ರನ್ಯಾ ರಾವ್ ಹೇಳಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್‌, ಜೈಲು ಮೆಮೋದ ಭಾಗವಾಗಿ ಎಡಿಜಿಗೆ ಸಲ್ಲಿಸಿರುವ ಪತ್ರದಲ್ಲಿ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ವಿಚಾರಣೆ ವೇಳೆ ಸರಿಯಾಗಿ ಊಟ ಕೊಟ್ಟಿಲ್ಲ, ನಿದ್ದೆ ಮಾಡಲೂ ಬಿಡದೆ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ ಖಾಲಿ ಹಾಳೆಗಳ ಮೇಲೆ ಸಹಿ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಹೆಚ್ಚು ಪ್ರಭಾವಶಾಲಿ ವ್ಯಕ್ತಿಗಳನ್ನು ರಕ್ಷಿಸಲು ತನ್ನನ್ನು ಸಿಲುಕಿಸಲಾಗಿದೆ. ಅಧಿಕಾರಿಗಳು ನನ್ನ ಮುಖಕ್ಕೆ 10 ರಿಂದ 15 ಬಾರಿ ಹೊಡೆದಿದ್ದಾರೆ. ನನ್ನ ತಂದೆಗೂ ಇದಕ್ಕೂ ಸಂಬಂಧವಿಲ್ಲ. ಆದರೂ ಅವರ ಹೆಸರನ್ನು ಬಹಿರಂಗಗೊಳಿಸುವುದಾಗಿ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ.

ನಾನು ನಿರ್ದೋಷಿಯಾಗಿದ್ದೇನೆ. ನನ್ನ ಮೇಲೆ ಒತ್ತಡ ಹಾಕಿ, ಹಿಂಸೆ ಕೊಟ್ಟಿದ್ದಾರೆ. ಅವರ ಹಿಂಸೆಯಿಂದಾಗಿ ನಾನು ಖಾಲಿ ಹಾಳೆಗಳಿಗೆ ಸಹಿ ಹಾಕಿದ್ದೇನೆ. ನನ್ನನ್ನು ತಪಾಸಣೆ ಮಾಡಿಲ್ಲ. ನನ್ನಿಂದ ಏನೂ ವಶಪಡಿಸಿಕೊಂಡಿಲ್ಲ ಎಂಬುದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ, ಅಧಿಕಾರಿಗಳು ಹಲ್ಲೆ ನಡೆಸಿದರಾ ಎಂದು ನ್ಯಾಯಾಧೀಶರು ಕೇಳಿದಾಗ, ನಟಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ, ಇದೀಗ ಅಧಿಕಾರಿಗಳು ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಕೇಸ್‌; ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Gold Smuggling case) ಬಂಧನವಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ರನ್ಯಾ ರಾವ್​ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರೆ, ಡಿಆರ್‌ಐ ಪರವಾಗಿ ಮಧು ರಾವ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್, ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು. ಇದೀಗ ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶಿಸಿದೆ.

ಮಾರ್ಚ್​ 3ರ ರಾತ್ರಿ ದುಬೈನಿಂದ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Money doubling scam: ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್