ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ration Card e-KYC: ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌; ರೇಷನ್‌ ಕಾರ್ಡ್‌ ಇ-ಕೆವೈಸಿ ಗಡುವು ನ.10ರವರೆಗೆ ವಿಸ್ತರಣೆ

ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು ‘ಅನ್ನ ಸೇವೆ’ ಆ್ಯಪ್‌ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದರಿಂದ ಮನೆಯಿಂದಲೇ ಇ-ಕೆವೈಸಿ ಮಾಡಬಹುದು. ಇನ್ನು ಈ ತಂತ್ರಾಂಶವನ್ನು ಇಂದಿನಿಂದ ದೇಶಾದ್ಯಂತ ವಿಸ್ತರಿಸಲಾಗಿದೆ. ಅಲ್ಲದೆ ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. ರೇಷನ್‌ ಕಾರ್ಡ್‌ ಇ-ಕೆವೈಸಿ (Ration Card e-KYC) ದೃಢೀಕರಿಸುವ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದ್ದು, ಈ ಮೊದಲು ಅಕ್ಟೋಬರ್ 20 ಇದ್ದ ಕೊನೆಯ ದಿನಾಂಕವನ್ನು ಇದೀಗ ನವೆಂಬರ್ 10ರವರೆಗೆ ವಿಸ್ತರಣೆ ಮಾಡಲಾಗಿದೆ. ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿದ ಫಲಾನುಭವಿಗಳ ಜತೆಗೆ, ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ 3,82,362 ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54,27,396 ಫಲಾನುಭವಿಗಳು ಇನ್ನೂ ಇ-ಕೆವೈಸಿ ದೃಢೀಕರಿಸಬೇಕಿದೆ. ಈ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಇ-ಕೆವೈಸಿ ಮಾಡಲು ‘ಅನ್ನ ಸೇವೆ’ ಆ್ಯಪ್

ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು ‘ಅನ್ನ ಸೇವೆ’ ಆ್ಯಪ್‌ ಅನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಮನೆಯಿಂದಲೇ ಇ-ಕೆವೈಸಿ ಮಾಡಬಹುದು. ಇನ್ನು ಈ ತಂತ್ರಾಂಶವನ್ನು ಇಂದಿನಿಂದ ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರರಾಜ್ಯಗಳಲ್ಲಿರುವ ರಾಜ್ಯದ ಪಡಿತರ ಚೀಟಿದಾರರು ಅಲ್ಲಿಂದಲೇ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸಬಹುದು.

ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿ ನಿಗದಿಯಾಗಿತ್ತು. ಆದರೆ ಇನ್ನೂ ಹಲವು ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 20ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ.