ಅಪೆಕ್ಸ್ ಬ್ಯಾಂಕಿಗೆ ರವಿ ಅಧ್ಯಕ್ಷ: ಸಿದ್ದು ಆಪ್ತ ರಾಜಣ್ಣಗೆ ನಿರಾಶೆ
ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಚುನಾವಣೆ ಸಂಬಂಧ ಅಧಿಕಾರ ಹಂಚಿಕೆ ಸೂತ್ರದ ಅನ್ವಯ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೊದಲ ಅವಧಿಗೆ ಅಧ್ಯಕ್ಷರಾಗುವ ಸಾಧ್ಯತೆ ಇತ್ತು. ಆದರೆ ರಾಜಣ್ಣಗೆ ಸ್ಥಾನ ಕೈತಪ್ಪಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ರವಿ ಹಾಗೂ ಉಪಾಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ಆಯ್ಕೆ ಆಗಿದ್ದಾರೆ
-
ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ನೇಮಕ ಶಿವಕುಮಾರ್ ಆಪ್ತಗೆ ಪಟ್ಟ, ರಾಜಣ್ಣ ಆಕ್ರೋಶ
ಬೆಂಗಳೂರು: ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಚುನಾವಣೆ ಸಂಬಂಧ ಅಧಿಕಾರ ಹಂಚಿಕೆ ಸೂತ್ರದ ಅನ್ವಯ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೊದಲ ಅವಧಿಗೆ ಅಧ್ಯಕ್ಷರಾಗುವ ಸಾಧ್ಯತೆ ಇತ್ತು. ಆದರೆ ರಾಜಣ್ಣಗೆ ಸ್ಥಾನ ಕೈತಪ್ಪಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ರವಿ ಹಾಗೂ ಉಪಾಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ಆಯ್ಕೆ ಆಗಿದ್ದಾರೆ. ಮೊದಲ ಎರಡೂವರೆ ವರ್ಷಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಎಂಎಲ್ʼಸಿ ಎಸ್. ರವಿ, ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: BCCI Apex Council meeting: ಐಪಿಎಲ್ ವಿಜಯೋತ್ಸವಕ್ಕೆ ಮಾರ್ಗಸೂಚಿ; ತ್ರಿಸದಸ್ಯ ಸಮಿತಿ ರಚನೆ
ಕೊನೆಗೂ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ ಅವರಿಗೆ ಸ್ಥಾನ ಕೊಡಿಸುವಲ್ಲಿ ಗೆದ್ದಿದ್ದಾರೆ. ಆದರೆ ಸಿದ್ದರಾಮಯ್ಯ ಆಪ್ತ ರಾಜಣ್ಣ ಅವರಿಗೆ ನಿರಾಸೆಯಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಣ್ಣ ಅಸಮಾಧಾನಗೊಂಡಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜಣ್ಣ ಒತ್ತಡ ಹಾಕಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ರಾಜಣ್ಣ ಒತ್ತಡಕ್ಕೆ ಮಣಿಯಲಿಲ್ಲ ಎನ್ನಲಾಗಿದೆ.
ಹೀಗಾಗಿ ಹಲವು ವರ್ಷದಿಂದ ಬ್ಯಾಂಕಿನ ಮೇಲೆ ಹಿಡಿತ ಹೊಂದಿದ್ದ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಕೇಂದ್ರ ಕಚೇರಿಯತ್ತ ಬಂದಿಲ್ಲ. ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದು ಈ ಮೂಲಕ ರಾಜಣ್ಣ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅಪೆಕ್ಸ್ ಬ್ಯಾಂಕ್ ಚುನಾವಣೆಯ ಹಿನ್ನೆಲೆ, ಎಲ್ಲಾ ನಿರ್ದೇಶಕ, ಸಿಎಂ ಅಭಿಪ್ರಾಯದ ಮೇರೆಗೆ ಈ ಬ್ಯಾಂಕ್‌ನ ಅಧ್ಯಕ್ಷರನ್ನು ಅವಿರೋಧ ಘೋಷಣೆ ಮಾಡಿ ದ್ದೇವೆ ಎಂದು ಸಚಿವ ಸವದಿ ತಿಳಿಸಿದ್ದಾರೆ. 2.5 ವರ್ಷಕ್ಕೆ ಸೀಮಿತವಾಗಿ ಆಯ್ಕೆ: ಚುನಾವಣೆ ಸಂಬಂಧ ಬುಧವಾರ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. 2.5 ವರ್ಷಕ್ಕೆ ಆಯ್ಕೆ ಮಾಡಲಾಗಿದೆ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.