ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿವಿಲ್​ ಕಾನ್ಸ್‌ಟೆಬಲ್‌ ಹುದ್ದೆ ನೇಮಕಾತಿ; ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ ಸಲ್ಲಿಕೆಯಾಗಿದೆ ಗೊತ್ತಾ?

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 08, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 03, 2026 ಕೊನೆಯ ದಿನಾಂಕವಾಗಿತ್ತು.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (Recruitment for Civil Constable post) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 08, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 03, 2026 ಕೊನೆಯ ದಿನಾಂಕವಾಗಿತ್ತು.

ಇದೀಗ ಒಟ್ಟು 3,68,858 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಅರ್ಜಿ ಸಲ್ಲಿಕೆಯಾಗಿವೆ ಎಂಬ ಜಿಲ್ಲಾವಾರು ಮಾಹಿತಿ ಇಲ್ಲಿದೆ.

WhatsApp Image 2026-07-18 at 8.09.07 AM

ಒಟ್ಟು 3,395 ಹುದ್ದೆಗಳಲ್ಲಿ ಪುರುಷ ಅಭ್ಯರ್ಥಿಗಳಿಗೆ 2266, ಮಹಿಳಾ ಅಭ್ಯರ್ಥಿಗಳಿಗೆ 755, ಸೇವಾನಿರತ ಪುರುಷರಿಗೆ 257, ಸೇವಾನಿರತ ಮಹಿಳೆಯರಿಗೆ 82 ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ 35 ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿದ್ದು, ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ.

1600 ಸಶಸ್ತ್ರ ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅಧಿಸೂಚನೆ ಪ್ರಕಟ

ಇತ್ತೀಚಿಗಷ್ಟೇ ಸಿವಿಲ್​ ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಸಶಸ್ತ್ರ ಪೊಲೀಸ್​ ಕಾನ್ಸ್​ಟೇಬಲ್ (ಸಿಎಆರ್​/ಡಿಎಆರ್​) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ, ನಗರ ಮತ್ತು ಘಟಕಗಳಲ್ಲಿ ಖಾಲಿ ಇರುವ 1600 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಒಟ್ಟು ಹುದ್ದೆಗಳು - 1600

ಸಾಮಾನ್ಯ ಹುದ್ದೆಗಳು - 1421

ಕಲ್ಯಾಣ ಕರ್ನಾಟಕ ಮೀಸಲು ಹುದ್ದೆ - 179

ಈ ಹುದ್ದೆಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಹಾಗೂ ಸೇವಾನಿರತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; 26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 18 ವರ್ಷಗಳಾಗಿದ್ದು, ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 33 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 35ವರ್ಷ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಸಲಾಗಿದೆ.

Vishakha Bhat Heggar

View all posts by this author