ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕನ್ನಡದ ಖ್ಯಾತ ಸಾಹಿತಿ ಕೆವಿ ನಾರಾಯಣ ನಿಧನ

ಕನ್ನಡದ ಹಿರಿಯ ಸಾಹಿತಿ, ಖ್ಯಾತ ಭಾಷಾಶಾಸ್ತ್ರಜ್ಞ, ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಡಾ.ಕೆ.ವಿ. ನಾರಾಯಣ್ (ಕೆವಿಎನ್) (78) ಅವರು ಇಂದು ನಿಧನರಾಗಿದ್ದಾರೆ. ಯಲಹಂಕದ ನಿವಾಸದಲ್ಲಿ ಅವರ ಆರೋಗ್ಯದಲ್ಲಿ ಗುರುವಾರ ತಡರಾತ್ರಿ ದಿಢೀರ್ ಏರುಪೇರಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕನ್ನಡದ ಖ್ಯಾತ ಸಾಹಿತಿ ಕೆವಿ ನಾರಾಯಣ ನಿಧನ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 6, 2026 11:07 AM

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಖ್ಯಾತ ಭಾಷಾಶಾಸ್ತ್ರಜ್ಞ, ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಡಾ.ಕೆ.ವಿ. ನಾರಾಯಣ್ (K.V. Narayana) (78) ಅವರು ಇಂದು ನಿಧನರಾಗಿದ್ದಾರೆ. ಯಲಹಂಕದ ನಿವಾಸದಲ್ಲಿ ಅವರ ಆರೋಗ್ಯದಲ್ಲಿ ಗುರುವಾರ ತಡರಾತ್ರಿ ದಿಢೀರ್ ಏರುಪೇರಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಎಚ್. ಎಸ್. ಶ್ರೀಮತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಂಪಲಾಪುರ ವೀರಣ್ಣ ನಾರಾಯಣ್ ಎಂಬ ಪೂರ್ಣ ಹೆಸರಿನ ಕೆ.ವಿ. ನಾರಾಯಣ್ ಅವರು 1948ರ ಅಕ್ಟೋಬರ್ 20ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಜನಿಸಿದ್ದರು. ಕನ್ನಡ ಭಾಷೆ, ಸಾಹಿತ್ಯ, ಭಾಷಾವಿಜ್ಞಾನ ಮತ್ತು ಸಾಹಿತ್ಯ ಮೀಮಾಂಸೆ ಕ್ಷೇತ್ರಗಳಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು, ತಮ್ಮ ವೈಚಾರಿಕ ಬರಹಗಳು ಹಾಗೂ ವಿಮರ್ಶೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಬಳಿಕ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಅಧ್ಯಯನ ಮುಂದುವರಿಸಿದರು. ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಮಾರ್ಗದರ್ಶನದಲ್ಲಿ ಆನಂದವರ್ಧನನ 'ಧ್ವನ್ಯಾಲೋಕ' ಕೃತಿಯನ್ನು ಅಧ್ಯಯನ ಮಾಡಿ ಪಿಹೆಚ್‌ಡಿ ಪದವಿ ಪಡೆದಿದ್ದರು. 1993ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕನ್ನಡ ಪ್ರಾಧ್ಯಾಪಕರಾಗಿ ಸೇರ್ಪಡೆಯಾದ ಅವರು, ಬಳಿಕ ವಿಶ್ವವಿದ್ಯಾಲಯದ ಕುಲಸಚಿವರಾಗಿ, ಡೀನ್ ಆಗಿ ಹಾಗೂ ಪ್ರಭಾರ ಕುಲಪತಿಯಾಗಿಯೂ ಸೇವೆ ಸಲ್ಲಿಸಿದ್ದರು.

ಇಷ್ಟೇ ಅಲ್ಲದೇ ಕರ್ನಾಟಕ ಸರ್ಕಾರದ 'ಕುವೆಂಪು ಭಾಷಾ ಭಾರತಿ ಪ್ರಾಧಿಕಾರ'ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕನ್ನಡವನ್ನು ಜ್ಞಾನ ಭಾಷೆಯನ್ನಾಗಿ ಬೆಳೆಸಲು 'ಕರ್ನಾಟಕ ಓದು' ಎಂಬ ವಿಶಿಷ್ಟ ಕಾರ್ಯಾಗಾರ ಸರಣಿಯನ್ನು ಆರಂಭಿಸಿದ್ದರು.

Sanjay Gupta: ಬಾತ್​​​ರೂಮ್​​​ನಲ್ಲಿ ಬಿದ್ದು ನಟ, ನಿರ್ದೇಶಕ ಸಂಜಯ್‌ ಗುಪ್ತಾ ನಿಧನ

ಇವರ ಪ್ರಮುಖ ಕೃತಿಗಳೆಂದರೆ 'ಬೇರು, ಕಂಡ, ಚಿಗುರು', 'ಕನ್ನಡ ಜಗತ್ತು: ಅರ್ಧ ಶತಮಾನ', 'ಶೈಲಿಶಾಸ್ತ್ರ', 'ಭಾಷೆಯ ಸುತ್ತಮುತ್ತ', 'ಹುತ್ತವ ಬಡಿದರೆ' (ನಾಟಕ) ಸೇರಿದಂತೆ ಹಲವು ಪ್ರಮುಖ ಕೃತಿಗಳನ್ನು ರಚಿಸಿದ್ದಾರೆ. ಇತ್ತೀಚೆಗಷ್ಟೇ ಅವರ 'ನುಡಿಗಳ ಅಳಿವು' ವಿಮರ್ಶಾ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. 2007ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಜಿ.ಎಸ್. ಶಿವರುದ್ರಪ್ಪ ಸಾಹಿತ್ಯ ವಿಮರ್ಶಾ ಪ್ರಶಸ್ತಿ, 2010ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳ ಗೌರವಗಳಿಗೆ ಅವರು ಭಾಜನರಾಗಿದ್ದರು. 'ನುಡಿಗಳ ಅಳಿವು' ಕೃತಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿತ್ತು.