ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಜ್ಯದ ಜೈಲುಗಳಲ್ಲಿ ಹೊಸ ರೂಲ್ಸ್‌; ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಹೊರಗಿನ ಸೌಕರ್ಯದ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಹೊರಗಿನಿಂದ ನೀಡುವ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸಂಬಂಧಿಸಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಮತ್ತು ನಟ ದರ್ಶನ್

ಬೆಂಗಳೂರು: ರಾಜ್ಯದ ಜೈಲುಗಳ ಕೈದಿಗಳಿಗೆ ಹೊರಗಿನಿಂದ ಆಹಾರ, ಬಟ್ಟೆ ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸಂಬಂಧಿಸಿ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಇದರಿಂದ ದರ್ಶನ್ (Actor Darshan) ಸೇರಿ ಇತರ ಕೈದಿಗಳಿಗೆ ಹೊರಗಿನಿಂದ ಸಿಗುತ್ತಿದ್ದ ಸೌಲಭ್ಯಗಳಿಗೆ ಕುತ್ತು ಎದುರಾಗಿದೆ.

ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯದ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಆರೋಪಿಗಳು ಜೈಲಿನಲ್ಲಿ ಕೊಡುವ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತದೆ. ಆದರೆ ಯಾವುದೇ ಹಾಸಿಗೆಯ ಸೌಲಭ್ಯ ಇರೋದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇತ್ತೀಚೆಗೆ ಕೋರ್ಟ್ ಆದೇಶದ ಮೂಲಕ ದರ್ಶನ್ ಹೆಚ್ಚುವರಿ ಬ್ಲಾಂಕೆಟ್ ಪಡೆದಿದ್ದರು. ಜೈಲ್ ಮ್ಯಾನ್ಯೂಯಲ್ ಪ್ರಕಾರ ಹೆಚ್ಚುವರಿ ಸೌಲಭ್ಯ ಒದಗಿಸುವ ಅಧಿಕಾರ ಡಿಜಿಪಿಗೆ ಇರಲಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಪ್ಯಾಕ್ ಮಾಡಿರುವ ಆಹಾರ ನೀಡಲು ಅವಕಾಶವಿದ್ದು, ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿ 2 ಕೆಜಿಯಷ್ಟಿರಬೇಕು. ಡ್ರೈಫ್ರೂಟ್ಸ್, ಬೇಕರಿ ತಿನಿಸು ಸೇರಿ 500 ಗ್ರಾಂ ಮೀರುವಂತಿಲ್ಲ. ವಿಚಾರಣಾಧೀನ ಕೈದಿಗಳಿಗೆ 2 ಜೊತೆ ಬಟ್ಟೆ, 2 ಒಳ ಉಡುಪು ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಜೈಲಿನಲ್ಲಿ ದೈಹಿಕ ತಪಾಸಣೆ, ಸೆಕ್ಯೂರಿಟಿ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದು, ಅಗತ್ಯವಿದ್ದರೆ ಜೈಲಿನ ಅಧಿಕಾರಿಗಳಿಂದ ಯಾವುದೇ ರೀತಿಯ ತಪಾಸಣೆ ಮಾಡಬಹುದು. ತಕ್ಷಣವೇ ಈ ನಿಯಮ ಜಾರಿಮಾಡುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಕಾರಾಗೃಹ ಡಿಜಿಪಿ ಸುತ್ತೋಲೆ ಹೊರಡಿಸಿದ್ದಾರೆ.

ಬಳ್ಳಾರಿ ಮಾಡೆಲ್ ಹೌಸ್‌ಗೆ ಬೆಂಕಿ ಪ್ರಕರಣ; ಬಾಲಾರೋಪಿಗಳು ಸೇರಿ 8 ಮಂದಿ ವಶಕ್ಕೆ

ಕರ್ನಾಟಕ ಕಾರಾಗೃಹ ಕಾಯ್ದೆ, 1963 ರ ಸೆಕ್ಷನ್ 30, ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾಗದ ಕ್ರಿಮಿನಲ್ ಕೈದಿಗಳು, ಖಾಸಗಿ ಮೂಲಗಳಿಂದ ಆಹಾರ, ಬಟ್ಟೆ, ಹಾಸಿಗೆ ಅಥವಾ ಇತರ ಅಗತ್ಯ ವಸ್ತುಗಳನ್ನು ಸರಿಯಾದ ಸಮಯದಲ್ಲಿ, ಪರೀಕ್ಷೆಗೆ ಒಳಪಟ್ಟು ಮತ್ತು ಇನ್ಸ್‌ಪೆಕ್ಟರ್ ಜನರಲ್ ಅನುಮೋದಿಸಬಹುದಾದ ನಿಯಮಗಳಿಗೆ ಅನುಸಾರವಾಗಿ ಖರೀದಿಸುವ ಅಥವಾ ಸ್ವೀಕರಿಸುವ ಮೂಲಕ ತಮ್ಮನ್ನು ತಾವು ನಿರ್ವಹಿಸಲು ಅನುಮತಿಸುತ್ತದೆ.