ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

N. Santosh Hegde: ವೇದಿಕೆ ಮೇಲೆ ಅಸ್ವಸ್ಥಗೊಂಡು ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತ ಪಿಜಿಆರ್‌ ಸಿಂಧ್ಯ ಅವರ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಸಂತೋಷ್ ಹೆಗ್ಡೆ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.

ನ್ಯಾ. ಸಂತೋಷ್‌ ಹೆಗ್ಡೆ

ಬೆಂಗಳೂರು: ರಾಜ್ಯದ ನಿವೃತ್ತ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (N. Santosh Hegde) ಅವರು ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ವೇಳೆ ವೇದಿಕೆ ಮೇಲೆಯೇ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತ ಪಿಜಿಆರ್‌ ಸಿಂಧ್ಯ ಅವರ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಸಂತೋಷ್ ಹೆಗ್ಡೆ ಅವರು ಭಾಗವಹಿಸಿದ್ದರು. ಆದರೆ, ವೇದಿಕೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಅವರು ಕುಸಿದು ಬಿದ್ದಿದ್ದು, ಇದನ್ನು ಕಂಡು ಸಭಾಂಗಣದಲ್ಲಿದ್ದವರು ಕ್ಷಣಕಾಲ ಆತಂಕಕ್ಕೊಳಗಾದರು.

_N. Santosh Hegde (1)

ಘಟನೆಯ ವೇಳೆ ಸ್ಥಳದಲ್ಲಿದ್ದ ಸ್ಪೀಕರ್ ಯು.ಟಿ. ಖಾದರ್ ಅವರು ತಕ್ಷಣವೇ ಸ್ಪಂದಿಸಿದರು. ಆಂಬ್ಯುಲೆನ್ಸ್ ಬರುವವರೆಗೆ ಕಾಯದೆ, ತಮ್ಮದೇ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ದಾಖಸುವ ವ್ಯವಸ್ಥೆ ಮಾಡಿದ್ದಾರೆ. ವಿಕ್ರಂ ಆಸ್ಪತ್ರೆಯ ವೈದ್ಯರು, ಸಂತೋಷ್ ಹೆಗ್ಡೆ ಅವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.

ಬೇಸಿಗೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವುದು ಹೇಗೆ? ಇಲ್ಲಿದೆ ಪೋಷಕರಿಗೆ ಪ್ರಮುಖ ಸಲಹೆಗಳು

ಮಧುಮೇಹದಿಂದ ಸಂತೋಷ್ ಹೆಗ್ಡೆ ಅವರು ಬಳಲುತ್ತಿದ್ದು, ಏಕಾಏಕಿ ರಕ್ತದ ಸಕ್ಕರೆ ಅಂಶದಲ್ಲಿ ಕುಸಿತ ಉಂಟಾಗಿದ್ದರಿಂದ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.