ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Lamborghini stunt in Bengaluru: ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌ನಲ್ಲಿ ರಿಕ್ಕಿ ರೈಗೆ ರಿಲೀಫ್‌; ಕೋರ್ಟ್‌ನಿಂದ ಜಾಮೀನು ಮಂಜೂರು

Ricky Rai Case: ಮಾರ್ಚ್ 21ರ ಮಧ್ಯರಾತ್ರಿ ನಗರದ ಅನಿಲ್‌ ಕುಂಬ್ಳೆ ವೃತ್ತದ ಬಳಿ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು. ಕಾರು ಚಾಲಕನ ಅಪಾಯಕಾರಿ ಸ್ಟಂಟ್‌ ಸಮೀಪದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ.

ಬೆಂಗಳೂರು, ಮಾರ್ಚ್ 23: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣದಲ್ಲಿ (Lamborghini stunt in Bengaluru) ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈಗೆ ರಿಲೀಫ್‌ ಸಿಕ್ಕಿದೆ. ರಸ್ತೆಯಲ್ಲಿ ಕಾರಿನ ಮೂಲಕ ಅಪಾಯಕಾರಿ ಸ್ಟಂಟ್‌ ಮಾಡಿದ ಹಿನ್ನೆಲೆ ಸಿಸಿಟಿವಿ ದೃಶ್ಯಾವಳಿ ಆಧರಿಸಿ ರಿಕ್ಕಿ ರೈ (Ricky Rai) ವಿರುದ್ಧ ಪೊಲೀಸರು ಎಫ್​​ಐಆರ್ ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದರು. ಇದೀಗ ರಿಕ್ಕಿ ರೈಗೆ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ.

ಏನಿದು ಪ್ರಕರಣ?

ಮಾರ್ಚ್ 21ರ ಮಧ್ಯರಾತ್ರಿ ನಗರದ ಅನಿಲ್‌ ಕುಂಬ್ಳೆ ವೃತ್ತದ ಬಳಿ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು. ಕಾರು ಚಾಲಕನ ಅಪಾಯಕಾರಿ ಸ್ಟಂಟ್‌ ಸಮೀಪದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.



ಪೊಲೀಸರು ಕಾರು ಸಂಚರಿಸಿದ ಮಾರ್ಗದುದ್ದಕ್ಕೂ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಿಕ್ಕಿ ರೈ ವಾಹನ ಚಲಾಯಿಸಿರುವುದಾಗಿ ತಿಳಿದುಬಂದಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಅಲ್ಲದೇ ಸದಾಶಿವನಗರದಲ್ಲಿನ ನಿವಾಸದಲ್ಲಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಕಾರಿನ ಮಾಲೀಕ ರಿಕ್ಕಿ ರೈ ಮಾತ್ರ, ಕಾರು ಓಡಿಸಿದ್ದು ನಾನಲ್ಲ ಎಂದು ಪ್ರಾಥಮಿಕವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸರು ಕಾರು ಸಂಚರಿಸಿದ ಮಾರ್ಗದುದ್ದಕ್ಕೂ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅದರಲ್ಲಿ ರಿಕ್ಕಿ ರೈ ಸ್ವತಃ ವಾಹನ ಚಲಾಯಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಪೊಲೀಸರಿಂದ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.