Road Accident: ಎರಡು ಪ್ರತ್ಯೇಕ ಅಪಘಾತಗಳಲ್ಲಿ 14 ಮಂದಿ ಸಾವು; ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ
Road Accident: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ಧಾರೆ.
ಬೆಂಗಳೂರು, ಜ.22: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಮೃತಪಟ್ಟ ಒಟ್ಟು 14 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ ಮೃತಪಟ್ಟ 10 ಮಂದಿ ಹಾಗೂ ರಾಯಚೂರಿನ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ 4 ಮಂದಿ ಮೃತಪಟ್ಟಿರುವುದಕ್ಕೆ ಸಿಎಂ ಸಂತಾಪ ಸೂಚಿಸಿ, ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
— CM of Karnataka (@CMofKarnataka) January 22, 2025
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
ಎರಡು ತಿಂಗಳ ಹಿಂದೆ ಮದುವೆಯಾದ ಯುವಕನೂ ಸಾವು
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆ ಸವಣೂರಿನ ಅಸ್ಲಂ ಬಾಬುಲಿ ಬೆಣ್ಣಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸವಣೂರ ನಿವಾಸಿ ಇಮ್ರಾನ್ ಮಾತನಾಡಿ, ‘ನಮಗೆ ಇನ್ನು ಮುಂದೆ ಸಂತೆಗೆ ಹೋಗಬಾರದು ಅನಿಸುತ್ತಿದೆ. ನಮ್ಮ ಮನೆಲಿ ಸಂತೆ ಅಂದ್ರೆ ತಗೊಂಡು ಹೊಡೆಯುತ್ತಾರೆ’ ಎಂದಿದ್ದಾರೆ. ನಾವು ಕೂಡ ಪ್ರತಿ ವಾರ ಸಂತೆಗೆ ಹೋಗುತ್ತಿದ್ದೆವು. ಆದರೆ, ಇವತ್ತು ತರಕಾರಿ ಇರದ ಕಾರಣಕ್ಕೆ ಹೋಗಿಲ್ಲ. ಇಂಥ ದುರ್ಘಟನೆ ಸಂಭವಿಸಬಾರದಿತ್ತು ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ | Assault Case: ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಮತ್ತೊಂದು ವಿಡಿಯೊ ವೈರಲ್
ಬೆಳಗಾವಿ ಸಮಾವೇಶದಲ್ಲಿ ಹೃದಯಾಘಾತದಿಂದ ಕೆಂಚಪ್ಪ ಸಾವು: 5 ಲಕ್ಷ ರೂ.ಪರಿಹಾರ ಘೋಷಿಸಿದ ಡಿಕೆಶಿ
ಬೆಂಗಳೂರು: ಬೆಳಗಾವಿಯ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಜನವರಿ 21ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಕೆಂಚಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.
ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.