ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Rains: ಬೆಂಗಳೂರಿನ ವಿವಿಧೆಡೆ ಬಿರುಸಿನ ಮಳೆ; ರಸ್ತೆಗಳು ಜಲಾವೃತವಾಗಿ ಭಾರಿ ಸಂಚಾರ ದಟ್ಟಣೆ!

ರಾಜ್ಯದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶನಿವಾರ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳು 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ನಾಲ್ಕು ದಿನ ಕರ್ನಾಟಕದಲ್ಲಿ ಮಳೆಯು ಅಬ್ಬರಿಸಲಿದೆ.

ಬೆಂಗಳೂರಿನ ದೇವಾಂಗ ಜಂಕ್ಷನ್ ಬಳಿ ರಸ್ತೆ ಜಲಾವೃತವಾಗಿರುವುದು.

ಬೆಂಗಳೂರು: ನಗರದ ಹಲವೆಡೆ ಶುಕ್ರವಾರ ಸಂಜೆ ಮಳೆ (Bengaluru Rains) ಅಬ್ಬರಿಸಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು. ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು, ಸಂಜೆಯಾಗುತ್ತಿದ್ದಂತೆ ಭಾರಿ ಮಳೆಯಾಗಿದೆ.

ನಗರದ ಮೆಜೆಸ್ಟಿಕ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ಯುಬಿ ಸಿಟಿ, ರಿಚ್ಮಂಡ್ ಸರ್ಕಲ್, ಶಿವಾನಂದ ಸರ್ಕಲ್, ಜಯನಗರ ಹಾಗೂ ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ, ಯಲಹಂಕ, ಹೆಬ್ಬಾಳ, ಆರ್‌ಟಿ ನಗರ, ಸಹಕಾರನಗರ, ವಿದ್ಯಾರಣ್ಯಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ವಿಜಯನಗರ, ನಾಯಂಡಹಳ್ಳಿ, ಮಾಗಡಿ ರಸ್ತೆ, ದಾಸರಹಳ್ಳಿ ಭಾಗದಲ್ಲೂ ಬಿರುಸಿನ ಮಳೆಯಾಗಿದೆ.

Bengaluru Rain (76)

ಸಂಜೆ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವರುಣ ಆರ್ಭಟದಿಂದ ವಾಹನ ಸವಾರರು ಪರದಾಡುವಂತಾಯಿತು. ಇನ್ನು ಧಾರಾಕಾರ ಮಳೆಗೆ ಬೆಂಗಳೂರಿನ ತಗ್ಗು ಪ್ರದೇಶಗಳು ಸಂಪೂರ್ಣ ಹೊಳೆಯಂತಾಗಿ ಮಾರ್ಪಟ್ಟಿವೆ. ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಮಂದಗತಿಯಲ್ಲಿ ಸಾಗಿದೆ. ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ.

ಮುಂದಿನ 4 ದಿನ ರಾಜ್ಯದಲ್ಲಿ ಅಬ್ಬರಿಸಲಿದೆ ಮಳೆ

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಇನ್ನು ನಾಳೆಯೂ (ಮೇ 30) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಮೇ 30ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಗದಗ, ಕೊಪ್ಪಳ, ಧಾರವಾಡ, ರಾಯಚೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Health Tips: ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಈ ಅದ್ಭುತ ಪ್ರಯೋಜನಗಳು ಸಿಗಲಿವೆ!

ಮೇ 31ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.