Rudra Garuda Purana Movie: ‘ರುದ್ರ ಗರುಡ ಪುರಾಣ’ ಚಿತ್ರದ ʼಅದೇನೇನೋ ಖುಷಿ ತಂದೆ, ಅದೇನೇನೋ ನಶೆ ತಂದೆʼ ಹಾಡು ಕೇಳಿ!
ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣʼ ಚಿತ್ರಕ್ಕಾಗಿ (Rudra Garuda Purana Movie) ಪ್ರಮೋದ್ ಮರವಂತೆ ಬರೆದಿರುವ ʼಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆʼ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.
Vishwavani News
January 11, 2025
ಬೆಂಗಳೂರು: 2025ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ, ಟೀಸರ್ ಮೂಲಕ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ರಿಷಿ (Rishi) ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣʼ ಚಿತ್ರಕ್ಕಾಗಿ (Rudra Garuda Purana Movie) ಪ್ರಮೋದ್ ಮರವಂತೆ ಬರೆದಿರುವ ʼಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆʼ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಕೃಷ್ಣಪ್ರಸಾದ್ ಸಂಗೀತ ನೀಡಿರುವ ಈ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಜನವರಿ 24ರಂದು ತೆರೆಕಾಣಲಿದೆ.
ಮಿಸ್ಟ್ರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ʼರುದ್ರ ಗರುಡ ಪುರಾಣʼ ದಲ್ಲಿ ಪ್ರೇಮ ಕಥೆಯೂ ಇದೆ. ಹೆಸರಾಂತ ನಿರ್ದೇಶಕ ಜೇಕಬ್ ವರ್ಗೀಸ್ ಅವರ ಬಳಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ನಂದೀಶ್ ನಿರ್ದೇಶನದ ಎರಡನೇ ಚಿತ್ರ ರುದ್ರ ಗರುಡ ಪುರಾಣ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ | Bengaluru International Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಕನ್ನಡ, ಭಾರತೀಯ, ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಚಲನಚಿತ್ರಗಳ ಆಹ್ವಾನ
ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.