ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Saalumarada Thimmakka: 113 ವರ್ಷದ ಹಿರಿಯ ಶತಾಯುಷಿ ಸಾಲುಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯಕ್ಕೀಡಾಗಿದ್ದಾರೆ. ಕಳೆದ 17 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಸಾಲು ಮರದ ತಿಮ್ಮಕ್ಕ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Prabhakara R
Prabhakara R Dec 16, 2024 8:11 PM
ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Saalumarada Thimmakka) ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
113 ವರ್ಷದ ಹಿರಿಯ ಶತಾಯುಷಿ ಸಾಲುಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯಕ್ಕೀಡಾಗಿದ್ದಾರೆ. ಕಳೆದ 17 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಸಾಲು ಮರದ ತಿಮ್ಮಕ್ಕ ಬಳಲುತ್ತಿದ್ದರು. ಸಾವಿರಾರು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ವೃಕ್ಷಮಾತೆಯೆಂದೇ ಇವರು ಹೆಸರು ಖ್ಯಾತಿಯಾಗಿದ್ದಾರೆ.
ಈ ಸುದ್ದಿಯನ್ನೂ ಓದಿ | Sambhal Temple: 45 ವರ್ಷಗಳ ಬಳಿಕ ತೆರೆದ ಸಂಭಾಲ್‌ ದೇವಾಲಯ-ದೇವರ ವಿಗ್ರಹಗಳು ಪತ್ತೆ; ಉತ್ಖನನ ಕಾರ್ಯ ಇನ್ನಷ್ಟು ಚುರುಕು
ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಕ್ಟೋಬರ್ 5ರಂದು ಸಹ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅದಕ್ಕೂ ಮುನ್ನ ಹಾಸನ ಜಿಲ್ಲೆಯ ಬಳ್ಳೂರಿನಲ್ಲಿ ವಾಸವಿದ್ದ ಆಕೆ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೆಪ್ಟೆಂಬರ್ 27 ರಂದು ಬೆಂಗಳೂರಿಗೆ ಮರಳಿದ್ದರು. ಬೆಟ್ಟದ ಬೇಲೂರು ಪ್ರದೇಶದ ತಂಪಾದ ವಾತಾವರಣದಿಂದ ಆಕೆ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಡಾ.ರವೀಂದ್ರ ಮೆಹ್ತಾ ಅವರ ತಂಡ ಚಿಕಿತ್ಸೆ ಒದಗಿಸಿದ ಬಳಿಕ ಗುಣಮುಖರಾಗಿದ್ದರು.