Alcohol Ban: ಎಣ್ಣೆ ಪ್ರಿಯರಿಗೆ ಶಾಕ್; ಬೆಂಗಳೂರಿನಲ್ಲಿ ಇಂದು, ನಾಳೆ ಮದ್ಯ ಮಾರಾಟ ನಿಷೇಧ
ನಗರದ ಎಲ್ಲೆಡೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆಗಸ್ಟ್ 31ರ ಬೆಳಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 1ರ ಬೆಳಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

-

ನಗರದ ಎಲ್ಲೆಡೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ದಿನಾಂಕ 31-08-2025 ರಂದು ಭಾನುವಾರ ರಜಾ ದಿನ ಆಗಿರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವ ಸಾಧ್ಯತೆ ಇದೆ.
ಹೀಗಾಗಿ ಕೆಲವರು ಮದ್ಯಪಾನ ಮಾಡಿ ಅನುಚಿತ ವರ್ತನೆ ಮಾಡುವ ಸಾಧ್ಯತೆ ಇರುತ್ತದೆಂದು ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲ್ಲೂಕಿನಲ್ಲಿರುವ ಎಲ್ಲಾ ಬಾರ್ ಗಳನ್ನು ದಿನಾಂಕ 31-08-2025 ರಂದು ಮುಚ್ಚಿಸಬೇಕೆಂದು ಕೋರಿದ್ದಾರೆ. ಆದ್ದರಿಂದ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಮದ್ಯ ನಿಷೇಧಿಸಲಾಗಿದೆ.
ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ: Physical Abuse: ಮದ್ಯದ ನಶೆಯಲ್ಲಿ ಪತ್ನಿಗೆ ಕಿರುಕುಳ; ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪಾಪಿ ಪತಿ
ಆಗಸ್ಟ್ 31ರ ಬೆಳಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 1ರ ಬೆಳಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್, ಜೆ.ಸಿ. ನಗರ, ಆರ್.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.