Actor Arjun Yogi: ಸ್ಯಾಂಡಲ್‌ವುಡ್ ನಟ ಅರ್ಜುನ್ ಯೋಗಿ ಕಾರು ಅಪಘಾತ; ನಜ್ಜುಗುಜ್ಜಾದ ವಾಹನ
Actor Arjun Yogi: ಬೆಂಗಳೂರಿನ ಆರ್.ಆರ್. ನಗರದ ಚನ್ನಸಂದ್ರದ ಸಮೀಪ ಸೋಮವಾರ ಮುಂಜಾನೆ ಅಪಘಾತ ನಡೆದಿದೆ. ಕಾರಿಗೆ ನಾಯಿ ಅಡ್ಡ ಬಂದ ಕಾರಣ, ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಾರು ಡಿಕ್ಕಿ ಹೊಡೆದಿದೆ. ಏರ್ ಬ್ಯಾಗ್ ಓಪನ್ ಆದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ.


ಬೆಂಗಳೂರು: ಸ್ಯಾಂಡಲ್‌ವುಡ್ ನಟ ಅರ್ಜುನ್ ಯೋಗಿ ಅವರ (Actor Arjun Yogi) ಕಾರು ಅಪಘಾತಕ್ಕೀಡಾಗಿರುವ ಘಟನೆ ಆರ್ ಆರ್ ನಗರದ ಚನ್ನಸಂದ್ರದ ಸಮೀಪ ಸೋಮವಾರ ಮುಂಜಾನೆ ನಡೆದಿದೆ. ಅರ್ಜುನ್ ಯೋಗಿ ಅವರು ತಮ್ಮ ಸ್ನೇಹಿತರ ಜತೆ ದೇವಸ್ಥಾನಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿಗೆ ನಾಯಿ ಅಡ್ಡ ಬಂದ ಕಾರಣ, ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಾರು ಡಿಕ್ಕಿ ಹೊಡೆದಿದೆ. ಏರ್ ಬ್ಯಾಗ್ ಓಪನ್ ಆದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಮಿಂಚುತ್ತಿರುವ ಅರ್ಜುನ್ ಯೋಗಿ, 'ಲಾಂಗ್ ಡ್ರೈವ್', 'ಅನಾವರಣ', 'ಚೇಜ್' ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ. 'ಅರಮನೆ ಗಿಳಿ', 'ಶಾಂತಿ ನಿವಾಸ' ಮುಂತಾದ ಸೀರಿಯಲ್‌ನಲ್ಲಿ ಅರ್ಜುನ್ ನಟಿಸಿದ್ದಾರೆ. 'ರಾಜಾ ರಾಣಿ' ಶೋನಲ್ಲೂ ಅರ್ಜುನ್ ಹೆಜ್ಜೆ ಹಾಕಿದ್ದರು. ಸದ್ಯ ಅವರು 'ವರ್ಣ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಈ ಸುದ್ದಿಯನ್ನೂ ಓದಿ | Road Accident: ವರಮಹಾಲಕ್ಷ್ಮಿ ಹಬ್ಬದಂದೇ ಅಪಘಾತದಲ್ಲಿ ನವ ವಿವಾಹಿತೆ ಸಾವು; ಸುದ್ದಿ ಕೇಳಿ ಅಜ್ಜಿಯೂ ನಿಧನ!
ಧರ್ಮಸ್ಥಳದಲ್ಲಿ ಹಲ್ಲೆ, ಯೂಟ್ಯೂಬರ್‌ಗಳ ಮೇಲೂ ಬಿತ್ತು ಕೇಸ್
ಧರ್ಮಸ್ಥಳ: ಧರ್ಮಸ್ಥಳದ ಅರಣ್ಯದಲ್ಲಿ ಹೆಣಗಳನ್ನು ಹೂಳಲಾಗಿದೆ ಎನ್ನಲಾದ ಕೇಸ್‌ಗೆ (Dharmasthala Case) ಸಂಬಂಧಿಸಿದಂತೆ ನಡೆದ ಹಲ್ಲೆ (Assault case) ಪ್ರಕರಣಕ್ಕೆ ಇನ್ನೊಂದು ತಿರುವು ದೊರೆತಿದೆ. ಯೂಟ್ಯೂಬರ್‌ಗಳ (youtubers) ಮೇಲೆ ಹಲ್ಲೆ ನಡೆದಿದೆ ಎಂದು ದೂರು ದಾಖಲಾಗಿದ್ದು, 6 ಮಂದಿಯ ಬಂಧನವಾಗಿತ್ತು. ಇದೀಗ ಯೂಟ್ಯೂಬರ್ ಗಳ ವಿರುದ್ಧವೂ ಹಲ್ಲೆಯ ಕುರಿತು ಎಫ್‌ಐಆರ್ ದಾಖಲಾಗಿದೆ. ಸ್ಥಳೀಯರಾದ ಹರೀಶ್ ನಾಯ್ಕ್ ಎಂಬವರು ದೂರು ನೀಡಿದ್ದು, ಆ ದೂರಿನ ಮೇರೆಗೆ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಯೂಟ್ಯೂಬರ್‌ಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ. 6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಹರೀಶ್ ನಾಯ್ಕ ದೂರು ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 50/2025 ಕಲಂ126(2)115(2) 352 ಜೊತೆಗೆ 3(5) ಬಿಎನ್‌ಎಸ್‌ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೊದಲು ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಆ.6 ರಂದು ಸಂಜೆ 4 ಮಂದಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಆ.9ರಂದು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬವರನ್ನು ಬಂಧಿಸಿದ್ದು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ ಬಳಿಕ 6 ಮಂದಿಗೂ ಮಧ್ಯಂತರ ಜಾಮೀನು (Bail) ಮಂಜೂರು ಮಾಡಲಾಗಿತ್ತು.
ಇದನ್ನೂ ಓದಿ: Dharmasthala Case: ಧರ್ಮಸ್ಥಳ ಗಲಾಟೆಗೆ ಸಂಬಂಧಿಸಿ 6 ಮಂದಿಯ ಬಂಧನ, ಜಾಮೀನು