ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mayur Patel: ಕುಡಿದ ಮತ್ತಿನಲ್ಲಿ ನಟ ಮಯೂರ್‌ ಪಟೇಲ್‌ ಸರಣಿ ಅಪಘಾತ, ಕಾರುಗಳಿಗೆ ಡಿಕ್ಕಿ

ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ರಾತ್ರಿ ತನ್ನ ಫಾರ್ಚೂನರ್ ಕಾರು ಚಲಾಯಿಸಿದ್ದು, ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಬೆಂಗಳೂರಿನ ದಮ್ಮಲೂರಿನ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೂರು ಕಾರುಗಳು ಜಖಂ ಆಗಿದ್ದು, ಈ ವೇಳೆ ಕಂಟ್ರೋಲ್ ರೂಮ್‌ಗೆ ಚಾಲಕರು ಕರೆ ಮಾಡಿದ್ದಾರೆ.

ಮಯೂರ್‌ ಪಟೇಲ್

ಬೆಂಗಳೂರು, ಜ.29 : ಬೆಂಗಳೂರಿನಲ್ಲಿ ಸ್ಯಾಂಡಲ್‌ವುಡ್‌ ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ಅನಾಹುತ ಎಸಗಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದು, ಈ ಸಂದರ್ಭದಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆಸಿ ಸರಣಿ ಅಪಘಾತ ಎಸಗಿದ್ದಾರೆ.

ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ರಾತ್ರಿ ತನ್ನ ಫಾರ್ಚೂನರ್ ಕಾರು ಚಲಾಯಿಸಿದ್ದು, ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಬೆಂಗಳೂರಿನ ದಮ್ಮಲೂರಿನ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೂರು ಕಾರುಗಳು ಜಖಂ ಆಗಿದ್ದು, ಈ ವೇಳೆ ಕಂಟ್ರೋಲ್ ರೂಮ್‌ಗೆ ಚಾಲಕರು ಕರೆ ಮಾಡಿದ್ದಾರೆ.

ಬಳಿಕ ಪೊಲೀಸರು ನಟ ಮಯೂರ್ ಪಟೇಲ್‌ರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಕಾರು ಮಾಲೀಕ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ನಟ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಂಚಾರ ಪೊಲೀಸರು ನಟ ಮಯೂರ್ ಪಟೇಲ್ ಅವರನ್ನು ವಶಕ್ಕೆ ಪಡೆದು 'ಡ್ರಿಂಕ್ ಆಂಡ್ ಡ್ರೈವ್' (DD) ತಪಾಸಣೆ ನಡೆಸಿದಾಗ ನಟ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಅಚ್ಚರಿಯ ವಿಷಯವೆಂದರೆ, ಅಪಘಾತ ಎಸಗಿದ ನಟನ ಕಾರಿನ ಇನ್ಸೂರೆನ್ಸ್ (ವಿಮೆ) ಕೂಡ ಲ್ಯಾಪ್ಸ್ ಆಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪಾರ್ಚೂನರ್ ಕಾರನ್ನು ಸೀಜ್ ಮಾಡಿದ್ದು, ಹಲಸೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಅಪಘಾತದಿಂದಾಗಿ ಕಾರ್ ಮಾಲೀಕ ಕಂ ಚಾಲಕ ಶ್ರೀನಿವಾಸ್ ಎಂಬುವವರ ಬದುಕು ಬೀದಿಗೆ ಬಂದಿದೆ. ಪೊಲೀಸ್ ಸ್ಟೇಷನ್ ಮುಂದೆಯೇ ಕಣ್ಣೀರಿಟ್ಟ ಶ್ರೀನಿವಾಸ್, 'ನನ್ನ ಹೆಂಡತಿಯ ಒಡವೆ ಅಡವಿಟ್ಟು ಕೇವಲ ಒಂದು ವಾರದ ಹಿಂದಷ್ಟೇ ಈ ಹೊಸ ಕಾರು ಖರೀದಿಸಿದ್ದೆ. ಕಂಪನಿಯೊಂದಕ್ಕೆ ಬಾಡಿಗೆಗೆ ಓಡಿಸುತ್ತಾ ಜೀವನ ಸಾಗಿಸುತ್ತಿದ್ದೆ. ಫೆಬ್ರವರಿ 5ಕ್ಕೆ ಮೊದಲ ಇಎಂಐ (EMI) ಕಟ್ಟಬೇಕಿದೆ. ಈಗ ಕಾರು ಜಖಂಗೊಂಡು ನಿಂತು ಹೋದರೆ ನಾನು ಸಾಲ ತೀರಿಸುವುದು ಹೇಗೆ?' ಎಂದು ಅಳಲು ತೋಡಿಕೊಂಡಿದ್ದಾರೆ.

ಅಪಘಾತವಾದ ತಕ್ಷಣ ಕಾರಿನಿಂದ ಇಳಿದು ಬಂದ ಮಯೂರ್ ಪಟೇಲ್, 'ನಾನು ಸಿನಿಮಾ ನಟ ಮಯೂರ್ ಪಟೇಲ್, ಬೆಳಿಗ್ಗೆ ಎಲ್ಲ ಸರಿ ಮಾಡಿಕೊಡ್ತೀನಿ' ಎಂದು ಹೇಳಿ ಜಾರಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ.

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಹರೀಶ್‌ ಕೇರ

View all posts by this author