ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸ್ಕೂಲ್ ಶಿಕ್ಷಣ ಸಂಸ್ಥೆ ಮಾನ್ಯತೆ ರದ್ದು ಮಾಡಿದ ಶಾಲಾ ಶಿಕ್ಷಣ ಇಲಾಖೆ

ಶಾಲೆಯ ಮಾನ್ಯತೆ ಹಿಂಪಡೆದು ನೋಂದಣಿ ರದ್ದು ಪಡಿಸಿರುವು ದರಿಂದ ಶಾಲೆಯನ್ನು ಮುಚ್ಚಿಸಿ ವಿದ್ಯಾರ್ಥಿಗಳಿಗೆ ಇತರೆ ಶಾಲೆಗಳಿಗೆ ದಾಖಲಿಸಬೇಕಾದ ಪ್ರಕ್ರಿಯೆ ಕೈಗೊಳ್ಳಬೇಕಾಗಿದ್ದು, ಈ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಕೋರಿ ಬೆಂಗಳೂರು ದಕ್ಷಿಣ ವಲಯ[4]ದ ಕ್ಷೇತ್ರ ಶಿಕ್ಷಣಾಧಿಕಾರಿ ಗಳು ಕೊಟ್ಟ ದೂರಿನ ಆಧಾರದ ಮೇಲೆ 318 (4), 336, 340 2.2.2 ರ ಅಡಿ ದೂರು ದಾಖಲಾಗಿದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ

ಬೆಂಗಳೂರು: ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಶಿಕ್ಷಣ ಸಂಸ್ಥೆ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ 1130 ವಿದ್ಯಾರ್ಥಿ ಗಳಿಗೆ ಏಳು ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲೆ ಮುಚ್ಚಲು ಕ್ಷೇತ್ರ ಸಮನ್ವಯಾಧಿಕಾರಿ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸಿದ್ದು, ಈ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲು ಬೆಂಗಳೂರು ದಕ್ಷಿಣ ವಲಯ[4]ದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಆಡಳಿತಾಧಿಕಾರಿ ಆದ ಖಾಲಿದ್ ಮುಷರಫ್ ಬಿನ್ ಅಬ್ದುಲ್ ಜಲೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದೂರಿನಡಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ನಿನ್ನೆ ಎಫ್.ಐ.ಆರ್ ದಾಖಲಾಗಿದೆ. ಶಾಲೆಯ ಮಾನ್ಯತೆ ಹಿಂಪಡೆದು ನೋಂದಣಿ ರದ್ದು ಪಡಿಸಿರುವು ದರಿಂದ ಶಾಲೆಯನ್ನು ಮುಚ್ಚಿಸಿ ವಿದ್ಯಾರ್ಥಿಗಳಿಗೆ ಇತರೆ ಶಾಲೆಗಳಿಗೆ ದಾಖಲಿಸಬೇಕಾದ ಪ್ರಕ್ರಿಯೆ ಕೈಗೊಳ್ಳಬೇಕಾಗಿದ್ದು, ಈ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಕೋರಿ ಬೆಂಗಳೂರು ದಕ್ಷಿಣ ವಲಯ[4]ದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೊಟ್ಟ ದೂರಿನ ಆಧಾರದ ಮೇಲೆ 318 (4), 336, 340 2.2.2 ರ ಅಡಿ ದೂರು ದಾಖಲಾಗಿದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ.

ಇದನ್ನೂ ಓದಿ: Bangalore News: ಡಾ.ವಿಷ್ಣು ಭರತ್ ಆಲಂಪಳ್ಳಿ ಅವರ ಲೈಫ್ ಟ್ವಿಸ್ಟ್ ಅಂಡ್ ಟರ್ನ್ ಎಂಬ ಪುಸ್ತಕ ಬಿಡುಗಡೆ

ಥಣಿ ಸಂದ್ರದ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಥಣಿಸಂದ್ರ ಶಾಲೆಯ ಆಡಳಿತ ಮಂಡಳಿಯು ಶಾಲಾ ಮಾನ್ಯತೆ ರದ್ದು ಮಾಡಿರುವ ವಿರುದ್ಧ ಸಲ್ಲಿಸಿದ್ದ ಮೇಲ್ಮನೆಯನ್ನು ಜ. 19 ರಂದು ಆಯುಕ್ತರು ತಿರಸ್ಕರಿಸಿದ್ದರು. ದಿ ಆಲ್ ಜಾಮೀಯ ಮಹಮ್ಮದೀಯ ಎಜುಕೇಷನ್ ಸೊಸೈಟಿ(ರಿ) ಮುಂಬೈ ಈ ಹೆಸರಿನಲ್ಲಿ ಸಂಸ್ಥೆಯು ನೋದಣಿಯಾಗಿದ್ದು, ಶಾಲೆಗೆ ಅನುಮತಿ ಪಡೆಯುವ ಸಂದರ್ಭದಲ್ಲಿ ಹಾಗೂ ಮಾನ್ಯತೆ ನವೀಕರಣ ಮತ್ತು ಶಾಲೆಯ ಹೆಸರು ಬದಲಾ ವಣೆಯ ಸಂದರ್ಭಗಳಲ್ಲಿ ಭಿನ್ನ ವಿಭಿನ್ನ ಹೆಸರುಗಳಲ್ಲಿ ಮೇಲ್ಮನವಿದಾರರು ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮತ್ತು ಮಾನ್ಯತೆ ನವೀಕರಣ ಮಾಡಿಕೊಂಡಿದೆ ಎಂದು ಪ್ರಾಧಿಕಾರ ಸ್ಪಷ್ಟವಾಗಿ ಹೇಳಿದೆ.

ಶಾಲೆಯ ಆಡಳಿತ ಮಂಡಳಿಯು ಶಾಲಾ ಶುಲ್ಕವನ್ನು ಸ್ವೀಕರಿಸಿ ವಿವಿಧ ಹೆಸರುಗಳಲ್ಲಿ ರಸೀದಿ ನೀಡಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ. ಅನುಮತಿ ಪಡೆದಿರುವ ಹೆಸರಿನಲ್ಲಿ ಶುಲ್ಕವನ್ನು ಪಡೆದು ರಸೀದಿ ನೀಡದೇ ಇರುವುದು ಆಡಳಿತ ಮಂಡಳಿಯ ಪ್ರಮುಖ ಲೋಪವಾಗಿದೆ.

ಶಾಲೆಯ ಆಡಳಿತ ಮಂಡಳಿಯು ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರೂ ಸಹ ಅದಕ್ಕೆ ತಕ್ಕಂತೆ ನಾಮಫಲಕ ಅಳವಡಿಸಿ ಕೊಂಡಿಲ್ಲ. ಬದಲಿಗೆ ಸಾಮರ್ ಇಂಟರ್ ನ್ಯಾಷನಲ್ ಸ್ಕೂಲ್ ಎಂದು ನಾಮಫಲಕ ಅಳವಡಿಸಿ ಪೋಷಕರನ್ನು ಮತ್ತು ಸಾರ್ವಜನಿಕರನ್ನು ಗೊಂದಲಕ್ಕೆ ದೂಡಿದೆ. ಶಾಲೆಯ 2013 ರಿಂದ 2024 ರವರೆಗಿನ ಎಲ್ಲಾ ದಾಖಲೆಗಳನ್ನು ಒಟ್ಟಾರೆಯಾಗಿ ಪರಿಶೀಲಿಸಿದಾಗ, ಶಾಲೆಯ ಆಡಳಿತ ಮಂಡಳಿಯು ಕರ್ನಾಟಕ ಶಿಕ್ಷಣ ಕಾಯ್ದೆ-1983 ರ ಸೆಕ್ಷನ್ 30, 31 ಮತ್ತು 36 ರಲ್ಲಿನ ಅಂಶಗಳನ್ನು ಉಲ್ಲಂಘಿಸಿ ಆಡಳಿತ ಮಂಡಳಿಯ ಹೆಸರು ಮತ್ತು ಶಾಲೆಗಳ ಹೆಸರನ್ನು ನಿರಂತರವಾಗಿ ಹಾಗೂ ನಿಯಮಬಾಹಿರವಾಗಿ ಬದಲಾಯಿಸಿರುವುದು ಸಾಬೀತಾಗಿದೆ.

ಹಲವಾರು ಅಕ್ರಮಗಳನ್ನು ಕ್ರಮಬದ್ಧಗೊಳಿಸಲು ಮೇಲ್ಮನವಿದಾರರು ಪ್ರಯತ್ನಿಸುತ್ತಿರುವುದನ್ನು ಪ್ರಾಧಿಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಶಿಕ್ಷಣ ಕಾಯ್ದೆ ನಿಯಮ 8(1) ರಲ್ಲಿ ತಿಳಿಸಿರುವಂತೆ ಶಾಲೆಯ ಆಡಳಿತ ಮಂಡಳಿಯು ಸುಳ್ಳು ದಾಖಲೆಗಳನ್ನು ಸಲ್ಲಿಸಿರುವ ಕಾರಣ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯು ಕ್ತರು ಸೂಚಿಸಿದ್ದರು. ಅದರಂತೆ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗಳು ದಿ ಆಲ್ ಜಾಮೀಯ ಮಹಮ್ಮದೀಯ ಎಜುಕೇಷನ್ ಸೊಸೈಟಿ(ರಿ) ಮುಂಬೈ ಈ ಹೆಸರಿನಲ್ಲಿ ಸಂಸ್ಥೆಯು ನೋದಣಿಯಾಗಿದ್ದು, ಶಾಲೆಗೆ ಅನುಮತಿ ಪಡೆಯುವ ಸಂದರ್ಭದಲ್ಲಿ ಹಾಗೂ ಮಾನ್ಯತೆ ನವೀಕರಣ ಮತ್ತು ಶಾಲೆಯ ಹೆಸರು ಬದಲಾವಣೆಯ ಸಂದರ್ಭಗಳಲ್ಲಿ ಭಿನ್ನ ವಿಭಿನ್ನ ಹೆಸರು ಗಳಲ್ಲಿ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮತ್ತು ಮಾನ್ಯತೆ ನವೀಕರಣ ಪಡೆದಿರುವುದು ಕ್ರಿಮಿನಲ್ ಸಂಚು ಆಗಿರುತ್ತದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಶಾಲಾ ಶುಲ್ಕವನ್ನು ಸ್ವೀಕರಿಸಿ ವಿವಿಧ ಹೆಸರುಗಳಲ್ಲಿ ರಸೀದಿಯನ್ನು ನೀಡಿರುವುದು ದಾಖಲೆಗಳಿಂದ ಸ್ಪಷ್ಟವಾಗಿದೆ. ಅನುಮತಿ ಪಡೆದಿರುವ ಹೆಸರಿನಲ್ಲಿ ಶುಲ್ಕವನ್ನು ಪಡೆದು ರಸೀದಿ ನೀಡದೇ ಇರು ವುದು ಪೋಷಕರಿಗೆ ಮಾಡಿದ ಮೋಸವಾಗಿದೆ. ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರೂ ಸಹ ಇದರ ನಾಮಫಲಕ ಅಳವಡಿಸಿಲ್ಲ, ಬದಲಿಗೆ ಸಾಮರ್ ಇಂಟರ್ ನ್ಯಾಷನಲ್ ಸ್ಕೂಲ್ ಎಂದು ನಾಮಫಲಕ ಅಳವಡಿಸಿ ಪೋಷಕರನ್ನು ಮತ್ತು ಸಾರ್ವಜನಿಕರನ್ನು ಗೊಂದಲಕ್ಕೆ ದೂಡಿರುವ ಕಾರಣದಿಂದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಆಡಳಿತಾಧಿಕಾರಿ ಆದ ಖಾಲಿದ್ ಮುಷರಫ್ ಬಿನ್ ಅಬ್ದುಲ್ ಜಲೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ ಆಗತ್ಯ ಕ್ರಮ ಜರುಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೊಲೀಸ ರಿಗೆ ದೂರು ನೀಡಿದ್ದಾರೆ. ಸದರಿ ಶಾಲೆಯ ಮಾನ್ಯತೆ ಹಿಂಪಡೆದು ನೋಂದಣಿಯನ್ನು ರದ್ದು ಪಡಿಸಿರುವುದರಿಂದ ಶಾಲೆಯನ್ನು ಮುಚ್ಚಿಸಿ ವಿದ್ಯಾರ್ಥಿಗಳಿಗೆ ಇತರೆ ಶಾಲೆಗಳಿಗೆ ದಾಖಲಿಸ ಬೇಕಾದ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಈ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಅವರು ಕೋರಿದ್ದಾರೆ.

*

* ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ 1 ರಿಂದ 10 ನೇ ತರಗತಿ ವರೆಗೆ ನಡೆಯುತ್ತಿರುವ ಶಾಲೆಯ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಸೆಕ್ಷನ್ 39 ರಂತೆ ರದ್ದು.

* ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಾಮೀಯಾ ಎಜುಕೇಷನ್ ಸೊಸೈಟಿ ಹೆಸರಿನಲ್ಲಿ ಐದು ಲಕ್ಷ ರೂಪಾಯಿ ಅನುದಾನ ಪಡೆದು ಮದರಸಾಗೆ ಬಳಕೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಅಲ್ಪ ಸಂಖ್ಯಾತ ಇಲಾಖೆಗೆ ಸೂಚನೆ.

* ಏಳು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.

* ಈ ಶಾಲೆಯ ಶೈಕ್ಷಣಿಕ ದಾಖಲಾತಿಯನ್ನು ಹತ್ತಿರದ ಸರ್ಕಾರಿ ಪ್ರೌಢಶಾಲೆಗೆ ಹಸ್ತಾಂತರಿಸಿ ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರತ್ಯೇಕವಾಗಿ ದಾಖಲೆ ವಹಿ ನಿರ್ವಹಿಸಬೇಕು.

* ಶಾಲೆಯನ್ನು ಮುಚ್ಚುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಇದಕ್ಕಾಗಿ ಕ್ಷೇತ್ರ ಸಮನ್ವಯಾಧಿಕಾರಿ ಟಿ.ಎಸ್. ರಾಧಾಮಣಿ ನೇತೃತ್ವದಲ್ಲಿ ನಾಲ್ವರ ಸಮಿತಿ ರಚನೆ.

* ವಿದ್ಯಾರ್ಥಿಗಳನ್ನು ಹತ್ತಿರದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಸ್ತಾಂತರಿಸಿ ವರದಿ ಸಲ್ಲಿಸ ಬೇಕು.