ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದಲ್ಲಿ ʼರಣಬಿಸಿಲುʼ: ಕ್ಷಾಮ ವಿಕ್ಷಮ ಇನ್ನಷ್ಟು ತಾಲೂಕು ಶೀಘ್ರವೇ ಬರ ಪಟ್ಟಿಗೆ: ಸಿಎಂ

ಹವಾಮಾನ ಇಲಾಖೆಯ ವರದಿ ಪ್ರಕಾರ ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಎಲ್‌ನಿನೋ ಪ್ರಭಾವದಿಂದ ಮಳೆ ಅಭಾವ ಉಂಟಾಗಿರುವುದು ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ತೀವ್ರ ಕಡಿಮೆಯಾಗಿರುವ ಬೆನ್ನಲ್ಲೆ ತಾಪಮಾನ ಏರಿಕೆ ಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬಿರು ಬೇಸಿಗೆಯಂತಹ ವಾತಾವರಣ ಕಂಡುಬಂದಿದೆ. ಮುಂಗಾರು ಮಳೆ ಕ್ಷೀಣಿಸಿದ್ದು ರಾಜ್ಯದ ಇನ್ನಷ್ಟು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಬೇಕಾದ ಅನಿವಾರ್ಯತೆ ಸರಕಾರಕ್ಕೆ ಎದುರಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಎಲ್‌ನಿನೋ ಪ್ರಭಾವ ದಿಂದ ಮಳೆ ಅಭಾವ ಉಂಟಾಗಿರುವುದು ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗಿದೆ.

ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗ ಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 4 ರಿಂದ 5 ಡಿಗ್ರಿ ತಾಪಮಾನ ಏರಿಕೆ ಯಾಗಿದೆ. ಸಾಮಾನ್ಯ ವಾಗಿ ಬೇಸಿಗೆಯಲ್ಲಿ ದಾಖಲಾಗುವಂತಹ ಬಿಸಿಲು ಇದೀಗ ಮುಂಗಾರು ಸಮಯದಲ್ಲಿ ದಾಖಲಾಗುತ್ತದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Heat Stroke: ಹೀಟ್‌ ಸ್ಟ್ರೋಕ್‌ಗೆ ರಾಜ್ಯದಲ್ಲಿ ಎರಡನೇ ಬಲಿ, ಬೆಳಗಾವಿಯಲ್ಲಿ ಅಧಿಕಾರಿ ಸಾವು

ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ 10 ದಿನಗಳ ಮುನ್ಸೂಚನೆ ಯಲ್ಲೂ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿವೆ.

ಅರ್ಧ ಶತಮಾನದ ಭೀಕರ ಬರ ಈ ಬಾರಿ ಮುಂಗಾರು ಅವಧಿಯಲ್ಲಿ ಈವರೆಗೆ ಶೇ.31ರಷ್ಟು ಮಳೆ ಕೊರತೆಯಾಗಿದೆ. ಇದು 1976ರ ನಂತರ ಜೂನ್ 1ರಿಂದ ಆಗಸ್ಟ್ ವರೆಗಿನ ಅತ್ಯಂತ ಕಡಿಮೆ ಸರಾಸರಿ ಮಳೆಯಾಗಿದೆ. 2012ರಲ್ಲಿ ರಾಜ್ಯದಲ್ಲಿ ಅತ್ಯಂತ ತೀವ್ರ ಬರಗಾಲ ಎದುರಾಗಿತ್ತು. 2002ರಲ್ಲಿ ರಾಜ್ಯ ಎರಡನೇ ಅತಿ ದೊಡ್ಡ ಬರ ಪರಿಸ್ಥಿತಿ ಎದುರಿಸಿತ್ತು. 2026ರಲ್ಲಿ ಇದಕ್ಕಿಂತಲೂ ಹೆಚ್ಚು ತೀವ್ರತೆಯ ಬರಗಾಲ ಎದುರಾಗಿದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Rain hit listfinal

ವೈಜ್ಞಾನಿಕ ವರದಿ ಆಧರಿಸಿ ಕ್ರಮ ಬರ ಘೋಷಣೆ

ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ಘೋಷಣೆ ವಿಚಾರದಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳನ್ನು ಆಧರಿಸಿ 2-3 ಹಂತಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಇನ್ನೂ ಹಲವು ತಾಲೂಕು ಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ತಾಲೂಕಿನಿಂದ ಬರದ ವರದಿಗಳು ಬರುತ್ತಿವೆ.

21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡ ಲಾಗುವುದು. ಶಾಸಕರು ಯಾರೂ ಆತಂಕಪಡಬೇಡಿ. ಎಲ್ಲಿ ಬರ ಇದೆ ಎಂಬುದನ್ನು ವೈಜ್ಞಾನಿಕ ವಾಗಿ ನಿರ್ಧರಿಸಬೇಕು. ಉಪಮುಖ್ಯ ಮಂತ್ರಿ ವರದಿಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಒಂದೇ ಸಲ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಹಂತಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನ ಸಭೆ ಅಧಿವೇಶನ ಕರೆದಿರುವು ದಾಗಿ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಹಿಂಗಾರಿನಲ್ಲೂ ಕೊರತೆ ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಅತ್ಯಂತ ಬಲಗೊಂಡಿದ್ದು ಇದರಿಂದ ಮುಂದಿನ ಫೆಬ್ರವರಿ 2027ರ ವರೆಗೂ ಮಳೆ ಕೊರತೆ ಮುಂದುವರಿಯ ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಯಾಗುವ ಸಾಧ್ಯತೆಯಿದೆ. ಅಕ್ಟೋಬರ್ ತಿಂಗಳಲ್ಲಿ ಆರಂಭ ವಾಗುವ ಹಿಂಗಾರು ಕೂಡ ಕೊರತೆ ಆಗುವ ಸಾಧ್ಯತೆಯಿದೆ ಎಂದು ವರದಿಗಳು ಮುನ್ಸೂಚನೆ ನೀಡಿವೆ.