ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Self Harming: ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

Self Harming: ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

Profile Prabhakara R Jan 18, 2025 11:09 PM

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ.

ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 4ನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ. ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Viral Video: ಹಗಲು ಹೊತ್ತಿನಲ್ಲೇ ಬೈಕ್ ಕದ್ದ ಖದೀಮ! ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೊ ವೈರಲ್

ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Student dies 1

ಪಾವಗಡ: ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾದ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ (Heart Attack) ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕಾಲೇಜು ಮುಗಿಸಿ ಹೋಗುತ್ತಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಾವಗಡದಲ್ಲಿ ಶನಿವಾರ ನಡೆದಿದೆ.

ಮೈಥಿಲಿ ಮೃತ ವಿದ್ಯಾರ್ಥಿನಿ. ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ, ಶನಿವಾರ ತರಗತಿ ಮುಗಿಸಿ ಪಟ್ಟಣದ ಬಸ್‌ ನಿಲ್ದಾಣದ ಕಡೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಸುಸ್ತಾಗಿ ಕೆಳಗೆ ಬಿದ್ದಿದ್ದಾಳೆ. ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ.

ಸಾರ್ವಜನಿಕ ಆಸ್ಪತ್ರೆಯ ಬಳಿ ವಿದ್ಯಾರ್ಥಿನಿಯ ಸ್ನೇಹಿತರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.