Self Harming: ಸಾಲದ ಬಾಧೆ, ಮಂತ್ರಿ ಮಾಲ್‌ನ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು. ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಬೆಂಗಳೂರು: ಸಾಲದ ಬಾಧೆಯಿಂದ (Debt) ಬೇಸತ್ತು ಆತ್ಮಹತ್ಯೆ (Self harming) ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ (Bengaluru news) ಅಂಥ ಮತ್ತೊಂದು ಆತ್ಮಹತ್ಯೆ ಪ್ರಕರಣ (Crime news) ವರದಿಯಾಗಿದೆ. ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು, ಸಾಲದಿಂದ ಬೇಸತ್ತು ಬೆಂಗಳೂರಿನ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ (Mantri Mall) 2ನೇ ಮಹಡಿಯಿಂದ ಜಿಗಿದು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿ ಟಿ.ಸಿ. ಮಂಜುನಾಥ್ (55) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು. ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆ, ನಾಲ್ವರು ಅರೆಸ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ಆಟೋ ಟಚ್ ಆಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯ ರೆಹಮದ್ ನಗರದಲ್ಲಿ ನಡೆದಿದೆ.
ಆಟೋ ಚಾಲಕ ಸಲ್ಮಾನ್ (27) ಕೊಲೆಯಾದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ರಹಮತ್ ನಗರದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಪರ್ವೇಜ್ ತಂದೆಗೆ ರಹಮತ್ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿ ಮನೆಗೆ ತೆರಳಿದ್ದ.
ಬಳಿಕ ಬಂಧಿತ ನಾಲ್ವರು ಆರೋಪಿಗಳು ಸಲ್ಮಾನ್ ಮನೆಗೆ ತೆರಳಿ ಅಲ್ಲಿ ಸಲ್ಮಾನ್ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ. ಗಲಾಟೆಯ ವೇಳೆ ಆಟೋ ಚಾಲಕ ಸಲ್ಮಾನ್ ಮೇಲೆ ಹಲ್ಲೆ ನಡೆಸಿದರು. ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಸಲ್ಮಾನ್ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಲ್ಮಾನ್ ಮೃತಪಟ್ಟಿದ್ದಾನೆ. ಆರ್ ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Gwalior Shocker: ಮಹಿಳೆ ಮತ್ತು ಮಗಳನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ದುಷ್ಕರ್ಮಿಗಳು!