ಉ.ಕರ್ನಾಟಕ, ಮಧ್ಯ ಕರ್ನಾಟಕ, ಮೈಸೂರು ಭಾಗಕೆ ಪ್ರತ್ಯೇಕ ತಂಡ: ಬರ ಅಧ್ಯಯನಕ್ಕೆ ಕೇಂದ್ರದ 3 ತಂಡ
ಒಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಿದರೆ, ಮತ್ತೊಂದು ತಂಡ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಲಿದೆ. ಮೂರನೇ ತಂಡ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಅಧ್ಯಯನ ನಡೆಸಲಿದೆ. ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿ ಸಲ್ಲಿಸಲಿವೆ.
-
ರಾಜ್ಯದಲ್ಲಿ 198ಕ್ಕೆ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ ನಡುವೆಯೇ ಕೇಂದ್ರದಿಂದ ಮೂರು ತಂಡಗಳು ಬರವೀಕ್ಷಣೆಗೆ ರಾಜ್ಯಕ್ಕೆ ಆಗಮಿಸುವ ದಿನಾಂಕ ನಿಗದಿಯಾಗಿದೆ. ಬರಪೀಡಿತ ಪ್ರದೇಶಗಳನ್ನು ಘೋಷಿಸಿರುವ ರಾಜ್ಯ ಸರಕಾರ ಈಗಾಗಲೇ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕೇಂದ್ರಕ್ಕೆ ಮನವಿ ಮಾಡಿದ್ದು, ಇದರ ಭಾಗವಾಗಿ ಅ.3ಕ್ಕೆ ಕೇಂದ್ರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಲಿವೆ.
ಒಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಿದರೆ, ಮತ್ತೊಂದು ತಂಡ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಲಿದೆ. ಮೂರನೇ ತಂಡ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಅಧ್ಯಯನ ನಡೆಸಲಿದೆ. ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿ ಸಲ್ಲಿಸಲಿವೆ.
ರಾಜ್ಯ ಸರಕಾರ ಈಗಾಗಲೇ ಕೇಂದ್ರಕ್ಕೆ ಜ್ಞಾಪನಪತ್ರ ಸಲ್ಲಿಸಿದ್ದು, ಅದರ ಆಧಾರದ ಮೇಲೆಯೇ ಕೇಂದ್ರದ ತಂಡಗಳು ಪರಿಶೀಲನೆ ನಡೆಸಲಿವೆ. ಇದರೊಂದಿಗೆ ರಾಜ್ಯ ಸರಕಾರದಿಂದ ಮತ್ತೊಂದು ಜ್ಞಾಪ ನಪತ್ರ ಕೂಡ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Karnataka Drought: ರಾಜ್ಯದಲ್ಲಿ ತೀವ್ರ ಬರಸ್ಥಿತಿ; ಮಧ್ಯಂತರ ಆರ್ಥಿಕ ನೆರವಿಗಾಗಿ ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಪತ್ರ
ಬರ ಪರಿಹಾರ ಬಿಡುಗಡೆ ಹೇಗೆ?: ಸೆ.30ಕ್ಕೆ ರಾಜ್ಯದಲ್ಲಿ ಮುಂಗಾರು ಅವಧಿ ಮುಕ್ತಾಯವಾಗಲಿದ್ದು, ಅದಾದ ಬಳಿಕ ಘೋಷಣೆಯಾಗಿರುವ ತಾಲೂಕುಗಳ ಹೊರತಾಗಿ ಇನ್ನುಳಿದ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಅಕ್ಟೋಬರ್ ಮೊದಲ ವಾರದಲ್ಲಿಯೇ, ರಾಜ್ಯದ ನಷ್ಟ ಹಾಗೂ ಅಗತ್ಯವಿರುವ ಪರಿಹಾರದ ಕುರಿತು ಸಮಗ್ರ ಮಾಹಿತಿ ಯನ್ನು ಒಳಗೊಂಡ ವರದಿ ಯನ್ನು ಕೇಂದ್ರದ ಮುಂದೆ ಮಂಡಿಸಲು ಸರಕಾರ ತೀರ್ಮಾನಿಸಿದೆ. ಈ ವರದಿ ಯೊಂದಿಗೆ ಕೇಂದ್ರದ ತಂಡ ಸಲ್ಲಿಸುವ ವರದಿ ಯನ್ನು ಆಧರಿಸಿ ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಾಗಲಿದೆ.
ಅನುದಾನಕ್ಕಾಗಿ ಮತ್ತೆ ಕಾನೂನು ಹೋರಾಟ?
ಈ ನಡುವೆ ಕಳೆದ ವರ್ಷ ಬರ ಪರಿಹಾರ ಒದಗಿಸುವಲ್ಲಿ ಕೇಂದ್ರದ ವಿಳಂಬ ಧೋರಣೆಯನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ರಾಜ್ಯ ಸರಕಾರವು ಇದೀಗ ಮತ್ತೊಮ್ಮೆ ಇದೇ ಹಾದಿಯಲ್ಲಿ ಸಾಗುವುದೇ ಎನ್ನುವ ಅನುಮಾನ ಶುರುವಾಗಿದೆ. ಈ ಬಗ್ಗೆ ಪರೋಕ್ಷ ಸುಳಿವು ನೀಡಿರುವ ಉಪಮುಖ್ಯಮಂತ್ರಿ ಹಾಗೂ ಕಂದಾಯ ಇಲಾಖೆ ಸಚಿವ ಪರಮೇಶ್ವರ ಅವರು, ಬರ ನಿರ್ವಹಣೆಗೆ ಕೇಂದ್ರ ಸರಕಾರದಿಂದ ಅನುದಾನ ದೊರೆಯದಿದ್ದರೆ ಮತ್ತೆ ಸುಪ್ರಿಂಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಲಿದೆ. ಕೇಂದ್ರ ಸರಕಾರ ಹಾಗೂ ಸಂಬಂಧಪಟ್ಟವರು ಅಂತಹ ಅವಕಾಶವನ್ನು ನೀಡಬಾರದು. ಬರ ಯಾವುದೇ ಪಕ್ಷದ ಸಮಸ್ಯೆಯಲ್ಲ. ಇದು ಕರ್ನಾಟಕದ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ. ಆದ್ದರಿಂದ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಹಂಚಿಕೊಳ್ಳಬೇಕು. ಕೇಂದ್ರಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿಯವರೂ ನಮೊಂದಿಗೆ ಬರಬೇಕು ಎಂದು ಮತ್ತೊಮೆ ಮನವಿ ಮಾಡುತ್ತೇನೆ ಎಂದು ಹೇಳಿದರು
ರಾಜ್ಯದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿರುವ ಎಲ್ಲ ತಾಲೂಕುಗಳ ಮಾಹಿತಿಯನ್ನು ಕೇಂದ್ರದ ಮೂರು ತಂಡಗಳು ಪರಿಶೀಲಿಸುವ ಸಾಧ್ಯತೆ
ಕೆಲವು ತಾಲೂಕುಗಳಿಗೆ ತಂಡಗಳು ನೇರವಾಗಿ ಭೇಟಿ ನೀಡಿ, ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸುವ ಸಾಧ್ಯತೆ
ರಾಜ್ಯ ಸರಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಹಾಗೂ ಸ್ಥಳ ಪರಿಶೀಲನೆಯ ವೇಳೆ ಕಂಡುಬರುವ ವಾಸ್ತವ ಪರಿಸ್ಥಿತಿಯಲ್ಲಿ ವ್ಯತ್ಯಾಸವಿದೆಯೇ ಎಂಬುದರ ಬಗ್ಗೆ ಅಧ್ಯಯನ
![]()
ಕೇಂದ್ರ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿಯನ್ನು ಸಲ್ಲಿಸಲಿವೆ. ರಾಜ್ಯ ಸರಕಾರ ಈಗಾಗಲೇ ಕೇಂದ್ರಕ್ಕೆ ಜ್ಞಾಪನಪತ್ರ ಸಲ್ಲಿಸಿದ್ದು, ಅದರ ಆಧಾರದಲ್ಲಿಯೇ ಕೇಂದ್ರದ ತಂಡಗಳು ಪರಿಶೀಲನೆ ನಡೆಸಲಿವೆ. ಇದರೊಂದಿಗೆ ರಾಜ್ಯ ಸರಕಾರದಿಂದ ಮತ್ತೊಂದು ಜ್ಞಾಪನಪತ್ರ ಕೂಡ ಸಲ್ಲಿಸಲಾಗುವುದು. ಕೇಂದ್ರ ತಂಡಗಳು ಅನುಸರಿಸುವ ಮಾರ್ಗಸೂಚಿಗಳನ್ನೇ ರಾಜ್ಯ ಸರಕಾರವೂ ಅನುಸರಿಸಿದೆ.
- ಡಾ.ಜಿ.ಪರಮೇಶ್ವರ ಉಪಮುಖ್ಯಮಂತ್ರಿ
![]()
ಬರ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ವಪಕ್ಷ ನಿಯೋಗದೊಂದಿಗೆ ಸೇರದಿದ್ದರೆ ರೈತರ ಹಿತಾಸಕ್ತಿ ಯನ್ನು ಸರಕಾರ ಕಡೆಗಣಿಸುವುದಿಲ್ಲ. ರಾಜ್ಯದ ರೈತರ ಹಿತ ಕಾಪಾಡಲು ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ಬರ ಪರಿಸ್ಥಿತಿಯ ಅಧ್ಯಯನ ಕುರಿತು ಅ.3ರಂದು ಕೇಂದ್ರದ ತಂಡ ಬರುತ್ತಿದೆ. ಆ ಸಮಿತಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಅಧಿಕಾರಿಗಳು ನೀಡಲಿದ್ದಾರೆ.
-ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ