ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KUWJ Election: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

Shivanand Tagadur: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

-

Prabhakara R Prabhakara R Oct 29, 2025 9:01 PM

ಬೆಂಗಳೂರು, ಅ.29: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union of Working Journalists-KUWJ) ರಾಜ್ಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು 90ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು.

ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು.

2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ ಮಾಡಿದ್ದು ಅವರ ಕ್ರೀಯಾಶೀಲತೆಗೆ ಸಾಕ್ಷಿ. 2018ರಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಕೆಯುಡಬ್ಲ್ಯೂಜೆಗೆ ಪ್ರವೇಶಿಸಿದ ತಗಡೂರು, ಅಧ್ಯಕ್ಷರೊಬ್ಬರ ರಾಜೀನಾಮೆ ತರುವಾಯ ಆ ಸಂಘಟನೆಯ ಚುಕ್ಕಾಣಿ ಹಿಡಿದರು.

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ನೆರವು ಕೊಡಿಸಲು ಶ್ರಮಿಸಿದ್ದರು. ಬಹುರೂಪಿ ಪ್ರಕಾಶನ ಪ್ರಕಟಿಸಿರುವ ಕೋವಿಡ್ ಕಥೆಗಳು ಪುಸ್ತಕದಲ್ಲಿ ಪ್ರತಿ ಘಟನೆಗಳನ್ನು ತಗಡೂರು ದಾಖಲಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಪತ್ರಕರ್ತರ ಮನೆಯಂಗಳಕ್ಕೆ ಕೆಯುಡಬ್ಲೂೃಜೆ ಎನ್ನುವ ಹೊಸ ಕಲ್ಪನೆಯೊಂದಿಗೆ ಹಿರಿಯ ಪತ್ರಕರ್ತರನ್ನು ಅವರ ಮನೆ ಅಂಗಳದಲ್ಲಿಯೇ ಗೌರವಿಸಿ, ಅವರ ಅನುಭವಗಳನ್ನು ದಾಖಲೀಕರಣ ಮಾಡಿದ್ದ್ದು ವಿಶೇಷ. ಅಷ್ಟೇ ಅಲ್ಲ, ಈ ಬಗ್ಗೆ ಅಮೃತ ಬೀಜ ಎನ್ನುವ ಪುಸ್ತಕವನ್ನು ಹೊರ ತಂದಿದ್ದಾರೆ. ರಾಜ್ಯ ಪತ್ರಕರ್ತರ ಸಮ್ಮೇಳನಗಳಿಗೆ ಹೊಸ ರೂಪ ನೀಡಿದ್ದಲ್ಲದೆ, ಪತ್ರಕರ್ತರ ಕ್ಷೇಮ ನಿಧಿಯನ್ನು ಒಂದು ಕೋಟಿಗೆ ಹೆಚ್ಚಿಸಿದ್ದು ಇವರ ಸಾಧನೆಯಾಗಿದೆ. ಹತ್ತು ಹಲವು ಕಾರ್ಯಕ್ರಮದ ಮೂಲಕ ಕೆಯುಡಬ್ಲ್ಯೂಜೆಗೆ ಹೊಸ ಆಯಾಮ ನೀಡಿದ ತಗಡೂರು ಅವರು ಸತತ ಎರಡು ಬಾರಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ | Training for Journalists: ಪತ್ರಕರ್ತರ ತರಬೇತಿಗಾಗಿ ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ - ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಮತ್ತೆರಡು ಸ್ಥಾನಕ್ಕೆ ಅವಿರೋಧ ಆಯ್ಕೆ:

ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಒಟ್ಟು ಒಂಬತ್ತು ಸ್ಥಾನಗಳಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಸಿ.ಲೋಕೇಶ್ ಮತ್ತು ಖಜಾಂಚಿ ಸ್ಥಾನಕ್ಕೆ ವಾಸುದೇವ ಹೊಳ್ಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.