ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Siddaramaiah's Delhi Visit: ರಾಜೀನಾಮೆ ಬೆನ್ನಲ್ಲೇ ದೆಹಲಿಯಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ

ಹಿರಿಯ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ನವದೆಹಲಿಗೆ ಭೇಟಿ ನೀಡಿದ್ದಾರೆ. ಎರಡು ಅವಧಿಯಲ್ಲಿ ಕರ್ನಾಟಕದ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

‌ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಿದ್ದರಾಮಯ್ಯ.

ನವದೆಹಲಿ: ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ಬೆಳಗ್ಗೆ ನವದೆಹಲಿಯ 10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ಭೇಟಿ ನೀಡಿದ್ದು, ಎರಡು ಅವಧಿಯಲ್ಲಿ ಕರ್ನಾಟಕದ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಹೈಕಮಾಂಡ್‌ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈಗಾಗಲೇ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿರುವ ಸಿದ್ದರಾಮಯ್ಯ ಅವರು ಕರ್ನಾಟಕ ರಾಜಕಾರಣದಲ್ಲಿ ಸಕ್ರಿಯವಾಗಿ ಉಳಿಯಲು ಬಯಸಿದ್ದಾರೆ ಎಂದು ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಕ್ಷದ ನಾಯಕತ್ವದಲ್ಲಿ ತಮ್ಮ ಭವಿಷ್ಯದ ಪಾತ್ರದ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.



ರಾಹುಲ್‌ ಗಾಂಧಿ ಅವರ ಜತೆ ಮಾತುಕತೆ ಬಳಿಕ, ರಾಜಕೀಯ ಬದಲಾವಣೆ ಹಾಗೂ ಸರ್ಕಾರ ರಚನೆ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿ ಸಿದ್ದರಾಮಯ್ಯ ಅವರ ಜತೆ ಶಾಸಕರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.

Karnataka New CM: ನಾಳೆಯೇ ನೂತನ ಸಿಎಂ ಆಯ್ಕೆ; ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಲ್‌ಪಿ ಸಭೆ ನಿಗದಿ

ಮಲ್ಲಿಕಾರ್ಜುನ ಖರ್ಗೆ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್‌

DK Shivakumar (79)

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ನವದೆಹಲಿಗೆ ತೆರಳಿದ್ದು, ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದ ಪಡೆದಿದ್ದಾರೆ.

ಮೂರು ವರ್ಷಗಳ ಆಡಳಿತ ಪೂರೈಸಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಹೀಗಾಗಿ ದೆಹಲಿಯಲ್ಲಿ ಖರ್ಗೆ ಅವರನ್ನು ಭೇಟಿಯಾಗಿರುವ ಡಿಕೆಶಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ಒಟ್ಟಿಗೆ ಊಟ ಸವಿದ ಸಿದ್ದರಾಮಯ್ಯ, ಡಿಕೆಶಿ

Siddaramaiah (64)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮುನಿಯಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜೊತೆಗೆ ದೆಹಲಿಯಲ್ಲಿ ಮಧ್ಯಾಹ್ನದ ಊಟ ಸವಿದರು.