ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru stampede: ಬೆಂಗಳೂರು ಕಾಲ್ತುಳಿತ ಪ್ರಕರಣ; ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಈಗಾಗಲೇ ಹಲವು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದೀಗ ಸಿಎಂ ಸಿದ್ಧರಾಮಯ್ಯ (Siddaramaiah) ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಈಗಾಗಲೇ ಹಲವು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದೀಗ ಸಿಎಂ ಸಿದ್ಧರಾಮಯ್ಯ (Siddaramaiah) ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ಈ ಬಗ್ಗೆ ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದರು.

ತರಾತುರಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಮಾಡಿದ್ದಕ್ಕೆ ಅಧಿಕಾರಿಗಳು, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೇಲೂ ಸಿಟ್ಟಾಗಿದ್ದರು. ಸಭೆಯಲ್ಲಿ ಸಚಿವರು ಗೋವಿಂದ ರಾಜು ಅವರ ಮೇಲೆ ಆರೋಪ ಮಾಡಿದ್ದರು. ಗೋವಿಂದರಾಜು ಅವರೇ ತಾರಾತುರಿಯಲ್ಲಿ ಸಂಭ್ರಮಾಚರಣೆ ನಡೆಸಲು ಅನುಮತಿ ಕೋರಿದ್ದಾರೆ ಎಂಬ ಆರೋಪ ನಿನ್ನೆ ಕೇಳಿ ಬಂದಿತ್ತು. ಇದೀಗ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಗಿದೆ.

WhatsApp Image 2025-06-06 at 3.34.07 PM

ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ದ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.

Vishakha Bhat Heggar

View all posts by this author