ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ, ಸಚಿವ ಸಂಪುಟವೂ ವಿಸರ್ಜನೆ

ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ನಿನ್ನೆ ಗುರುವಾರ, ಸಿದ್ದರಾಮಯ್ಯ ಲೋಕ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅಂಗೀಕರಿಸಿರಲ್ಲಿಲ್ಲ. ಇಂದು ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ದೆಹಲಿಗೆ ತೆರಳಿದ್ದಾರೆ. ಡಿಕೆ ಶಿವಕುಮಾರ್‌ ಮುಂದಿನ ಸಿಎಂ ಆಗುವುದು ಬಹುತೇಕ ಖಚಿತವಾಗಿದೆ. ನಾಳೆ (ಮೇ 30) ಶಾಸಕಾಂಗದ ಸಭೆ ನಡೆಯಲಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಸದ್ಯಕ್ಕೆ ಸಭೆಯ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Vishakha Bhat Heggar

View all posts by this author