ಬೆಂಗಳೂರು: ಮುಡಾ ಪ್ರಕರಣದ ದೂರುದಾರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಅನ್ವಯ ಬೆಂಗಳೂರು ಸೈಬರ್ ಪೊಲೀಸರು ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಅರೆಸ್ಟ್ ಮಾಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ 1.6 ಕೋಟಿ ರೂ. ಹಣ ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ, ತಮ್ಮ ವಿರುದ್ಧ ಸುಳ್ಳು, ಆಧಾರರಹಿತ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಡಿ.ಬಿ. ನಟೇಶ್ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಬಂಧನವಾಗಿದೆ.
ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೆಲಸದ ನಿಮಿತ್ತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಆಗಮಿಸಿದ್ದರು. ಈ ಬಗ್ಗೆ ಮುನ್ಸೂಚನೆ ಪಡೆದಿದ್ದ ಸಿಸಿಬಿ ಪೊಲೀಸರು, ಕೋರ್ಟ್ ಆವರಣದ ಬಳಿಯೇ ಅವರನ್ನು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.
ಪ್ರವಾಸಕ್ಕೆ ಹೋಗಲು ಗಂಡ ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ
ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆದರೆ, ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.
ನಗರದ ಸರಸ್ವತಿಪುರಂನ ನಿವಾಸಿ ಸಂಧ್ಯಾ (46) ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬುವವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜತೆ ವಾಸವಿದ್ದರು.
ತಾನು ಸತ್ತರೆ ಒಂಟಿಯಾಗ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಇಸ್ರೋ ನಿವೃತ್ತ ಉದ್ಯೋಗಿ!
ನೆನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಆದರೆ, ತನ್ನ ಅಕ್ಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.