ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Social Media Ban for Children: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

Social Media Ban For Children: ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ

ಸಾಂದರ್ಭಿಕ ಚಿತ್ರ -

Prabhakara R
Prabhakara R Mar 6, 2026 11:33 AM

ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಅಡ್ಡ ಪರಿಣಾಮಗಳು ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

ಕರ್ನಾಟಕ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಕುರಿತು ಚಿಂತನೆ ನಡೆಸಿತ್ತು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಸಾಮಾಜಿಕ ಮಾಧ್ಯಮ ದುರ್ಬಳಕೆಯಿಂದ ಮಕ್ಕಳಿಗೆ ಆಗುವ ಹಾನಿ ಗಂಭೀರವಾಗಿದೆ ಎಂದು ತಿಳಿಸಿದ್ದರು.

Karnataka Budget 2026 LIVE: ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ; ಇಂದಿನ ಬಜೆಟ್‌ನ ಮುಖ್ಯಾಂಶಗಳು ಇಲ್ಲಿವೆ

ಫಿನ್‌ಲ್ಯಾಂಡ್ ಈ ಕುರಿತು ಕ್ರಮ ಕೈಗೊಂಡಿದ್ದು, ಬ್ರಿಟನ್ ಚಿಂತನೆ ನಡೆಸಿತ್ತು. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ನಿಷೇಧ ಘೋಷಿಸಿತ್ತು. ಈ ಮಾದರಿಗಳನ್ನಿಟ್ಟುಕೊಂಡು ಕರ್ನಾಟಕದಲ್ಲಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಮತ್ತು ‘ಬಿಯಾಂಡ್ ಸ್ಕ್ರೀನ್ಸ್’ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಜವಾಬ್ದಾರಿಯುತ ಬಳಕೆಗೆ ಮಾರ್ಗದರ್ಶನ ನೀಡಲಾಗಿತ್ತು. 2025-26 ಆರ್ಥಿಕ ಸಮೀಕ್ಷೆಯಲ್ಲಿ ವಯಸ್ಸಿನ ಆಧಾರಿತ ನಿರ್ಬಂಧ ಶಿಫಾರಸು ಮಾಡಲಾಗಿದೆ ಎಂದು ಎಸ್. ಸುರೇಶ್ ಕುಮಾರ್ ತಿಳಿಸಿದ್ದರು. ಇದೀಗ ಅಧಿಕೃತವಾಗಿ 2026-27ರ ಕರ್ನಾಟಕ ಬಜೆಟ್​ನಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.