ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ; ಮುಂದಿನ ಯೋಜನೆ ಬಗ್ಗೆ ಹೇಳಿದ್ದೇನು?
Sowmya Reddy: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರು ಇಲ್ಲ ಎಂದು ಆರೋಪಿಸಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನೂ ರವಾನಿಸಿದ್ದಾರೆ.
ಸೌಮ್ಯಾ ರೆಡ್ಡಿ (ಸಂಗ್ರಹ ಚಿತ್ರ) -
ಬೆಂಗಳೂರು, ಅ. 17: ರಾಜ್ಯ ಕಾಂಗ್ರೆಸ್ ಒಳಗೆ ಹೊಗೆಯಾಡುತ್ತಿದ್ದ ಅಸಮಾಧಾನ ಇದೀಗ ಬಹಿರಂಗಗೊಂಡಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ (Sowmya Reddy) ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರು ಇಲ್ಲ ಎಂದು ಆರೋಪಿಸಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನೂ ರವಾನಿಸಿದ್ದಾರೆ. ಒಂದೆಡೆ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಮಧ್ಯೆ ಕಾಂಗ್ರೆಸ್ ಈ ರಾಜೀನಾಮೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.
ಒಳಗೊಳಗೇ ಬೇಯುತ್ತಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಮಾನ ನೀಡಿಲ್ಲ ಎಂಬ ಅಸಮಾಧಾನ ಇದೀಗ ಬಹಿರಂಗವಾಗಿಯೇ ಸ್ಫೋಟಗೊಂಡಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ:
Karnataka Mahila Congress chief Sowmya Reddy resigns because CM DK Shivakumar's cabinet has ZERO women ministers. 🚨 Big talk on women empowerment, zero seats in reality.
— Himanshu Jain (@HemanNamo) October 17, 2026
ʼʼಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಹೈಕಮಾಂಡ್ ಇದುವರೆಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಖಂಡಿತ ಮಹಿಳೆಯರಿಗೆ ಸಚಿವ ಸ್ಥಾನ ಒದಗಿಸುವುದಾಗಿ ಹೈಕಮಾಂಡ್ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಭರವಸೆ ಕಾರ್ಯ ರೂಪಕ್ಕೆ ಬಂದಿಲ್ಲʼʼ ಎಂದು ಸೌಮ್ಯಾ ರೆಡ್ಡಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಜಯನಗರ ಮತ ಎಣಿಕೆ ವಿವಾದ, ಸೌಮ್ಯ ರೆಡ್ಡಿ ವಿರುದ್ಧ ರಾಮಮೂರ್ತಿ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ವಜಾ
ಆಗಸ್ಟ್ನಲ್ಲೇ ರಾಜೀನಾಮೆ
ಅಚ್ಚರಿಯ ವಿಚಾರ ಎಂದರೆ ಸೌಮ್ಯಾ ರೆಡ್ಡಿ ಆಗಸ್ಟ್ 20ರಂದೇ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಮಾತನಾಡಿದ ಅವರು, ʼʼಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು 2 ವರ್ಷಕ್ಕೆ ಮಾತ್ರ ಒಪ್ಪಿಕೊಂಡಿದ್ದೆ. ಮತ್ತೆ ಆ ಸ್ಥಾನದಲ್ಲಿ ಮುಂದುವರಿಸಲು ಬಯಸುತ್ತಿಲ್ಲ. ಹೊಸ ಅಧ್ಯಕ್ಷರು ಸಿಗುವವರೆಗೆ ಈ ಸ್ಥಾನದಲ್ಲಿ ಮುಂದುವರಿಯುತ್ತೇನೆʼʼ ಎಂದು ಹೇಳಿದ್ದಾರೆ. ʼʼಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುತ್ತೇನೆ. 2028ರಲ್ಲಿ ರಾಜ್ಯದಲ್ಲಿ ಮತ್ತು 2029ರಲ್ಲಿ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆʼʼ ಎಂದು ಭರವಸೆ ನೀಡಿದ್ದಾರೆ.
ರಾಮಲಿಂಗಾ ರೆಡ್ಡಿ ಪುತ್ರಿ
ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ. ಮಾಜಿ ಶಾಸಕಿಯಾಗಿರುವ ಇವರು ಕೂಡ ಪಕ್ಷದ ಪ್ರಮುಖ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. 2023ರಲ್ಲಿ ನಡೆದಿದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದಿಂದ ಸಿ.ಕೆ. ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಕೇವಲ 16 ಮತಗಳಿಂದ ಪರಾಭವಗೊಂಡಿದ್ದರು. ಈ ಸಂಬಂಧ, ಸಿ.ಕೆ. ರಾಮಮೂರ್ತಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲನ್ನೂ ಏರಿದ್ದರು.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.