ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada Pustaka Habba: ರಾಷ್ಟ್ರೋತ್ಥಾನ ಕನ್ನಡ ಪುಸ್ತಕ ಹಬ್ಬದಲ್ಲಿ ನ.29, 30ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ

ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದಲ್ಲಿ ನವೆಂಬರ್‌ 29 ರಂದು ಶನಿವಾರ ಹಾಗೂ ನವೆಂಬರ್‌ 30ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯ ಕನ್ನಡ ಪುಸ್ತಕ ಹಬ್ಬ.

ಬೆಂಗಳೂರು, ನ.28: ರಾಷ್ಟ್ರೋತ್ಥಾನ ಸಾಹಿತ್ಯ (Rashtrotthana Sahitya) ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದಲ್ಲಿ (Kannada Pustaka Habba) ನವೆಂಬರ್‌ 29 ರಂದು ಹಾಗೂ 30ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ (Special Lecture Programme) ಹಮ್ಮಿಕೊಳ್ಳಲಾಗಿದೆ.

ನ.29 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಅವರಿಂದ ‘ಸುಭದ್ರ ಬದುಕು-ಸದೃಢ ದೇಶಕ್ಕಾಗಿ ಪಂಚ ಪರಿವರ್ತನೆʼ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಇರಲಿದೆ.

ನ.30ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಲೇಖಕ, ಅಂಕಣಕಾರ, ವಾಗ್ಮಿ, ಸಂಘಟಕರು ಆಗಿರುವ ಚಕ್ರವರ್ತಿ ಸೂಲಿಬೆಲೆ ಅವರಿಂದ ʼತಾಯೇ ವಂದಿಸುವೆʼ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

Kannada Pustaka Habba

ಬೆಂಗಳೂರಿನಲ್ಲಿ ಡಿ.25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ

ಕನ್ನಡ ಪುಸ್ತಕ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನ.29ರಂದು ಶನಿವಾರ ಸಂಜೆ 6 ಗಂಟೆಗೆ ನಾಗಚಂದ್ರಿಕಾ ಭಟ್‌ ಹಾಗೂ ತಂಡದವರಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ನ.30ರಂದು ಭಾನುವಾರ ಸಂಜೆ 6 ಗಂಟೆಗೆ ವಿದ್ವಾನ್‌ ಪ್ರಕಾಶ್‌ ಹೆಗ್ಡೆ ಕಲ್ಲಾರೆಮನೆ ಹಾಗೂ ತಂಡದವರಿಂದ ವಾದ್ಯಗೋಷ್ಠಿ ನಡೆಯಲಿದೆ.