ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಾಜಿ ದೇವದಾಸಿಯರು, ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್: ಲಕ್ಷ್ಮಿ ಹೆಬ್ಬಾಳ್ಕರ್‌

Laxmi Hebbalkar: ಮರು ಸಮೀಕ್ಷೆಯಿಂದ ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಬೆಂಗಳೂರು, ಮಾ.23: ಮರು ಸಮೀಕ್ಷೆಯಿಂದ ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಬಜೆಟ್ ಅಧಿವೇಶನದಲ್ಲಿ ಸೋಮವಾರ ವಿಧಾನ ಪರಿಷತ್ ಕಲಾಪದ ವೇಳೆ ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಗೆ ಸಂಬಂಧಿಸಿದಂತೆ ಗಮನ ಸೆಳೆದಾಗ ಉತ್ತರಿಸಿದ ಸಚಿವರು, ಮಾಜಿ ದೇವದಾಸಿ ಮಹಿಳೆಯರಿಗಾಗಿ ಹೆಚ್ಚಿನ ಪಿಂಚಣಿ, ವಸತಿ, ಆರೋಗ್ಯ ಹಾಗೂ ಆದಾಯೋತ್ಪನ್ನಕರ ಚಟುವಟಿಕೆ ಹಾಗೂ ಸಾಲಸೌಲಭ್ಯ ಒದಗಿಸಲಾಗುತ್ತದೆ ಎಂದರು.‌

45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪಿಂಚಣಿಯನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2013-14 ರಿಂದ ಈವರೆಗೆ ಒಟ್ಟು 13,663 ಮಾಜಿ ದೇವದಾಸಿ ಮಹಿಳೆಯರಿಗೆ 30,000 ರೂಪಾಯಿಗಳಿಂದ 50,000 ರೂಪಾಯಿಗಳವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗಿದೆ ಎಂದರು.‌

ಮಾಜಿ ದೇವದಾಸಿ ಮಹಿಳೆಯರಿಗಾಗಿ ಹೆಚ್ಚಿನ ಪಿಂಚಣಿ, ವಸತಿ, ಆರೋಗ್ಯ ಹಾಗು ಆದಾಯೋತ್ಪನ್ನಕರ ಚಟುವಟಿಕೆ ಹಾಗೂ ಸಾಲಸೌಲಭ್ಯ ಒದಗಿಸಲಾಗುತ್ತದೆ. ರಾಜೀವ್ ಗಾಂಧಿ ವಸತಿ ನಿಗಮದಿಂದ 10,725 ಮಂದಿ ವಸತಿ ಸೌಲಭ್ಯವನ್ನು ಪಡೆದಿರುತ್ತಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ಇನ್ನೆರಡು ತಿಂಗಳಲ್ಲಿ ಉದ್ಯೋಗಿನಿ‌ ಯೋಜನೆಯ ಸಹಾಯ ಧನ ಬಿಡುಗಡೆ; ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಘೋಷಣೆ

ಮರು ಸಮೀಕ್ಷೆಯನ್ನು ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಯಿತು. ಮರುಸಮೀಕ್ಷೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ 1ನೇ, 2ನೇ ಹಾಗೂ 3ನೇ ತಲೆಮಾರಿನ ಒಟ್ಟು 90,092 ಮಾಜಿ ದೇವದಾಸಿಯರ ಮಕ್ಕಳು ಇರುವುದಾಗಿ ತಿಳಿದು ಬಂದಿರುತ್ತದೆ. ಅವರಿಗೆ ಶಿಕ್ಷಣ, ಕೌಶಲ್ಯ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗು ಆದಾಯೋತ್ಪನ್ನಕರ ತರಬೇತಿ ಹಾಗು ಸಾಲ ಸೌಲಭ್ಯ ನೀಡುವ ಬಗ್ಗೆ ಕ್ರಿಯಾ ಯೋಜನೆಯನ್ನು ತಯಾರಿಸಿ ಸಮಾಜ ಕಲ್ಯಾಣ ಇಲಾಖೆಯವರಿಗೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರಿಸಿದರು.