ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

SSC GD Constable Exam 2026: ಎಸ್‌ಎಸ್‌ಸಿ ಜಿಡಿ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಬಿಎಸ್ಎಫ್, ಸಿಐಎಸ್ಎಫ್ ಸೇರಿ ವಿವಿಧ ಭದ್ರತಾ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದರಲ್ಲಿ 23,467 ಹುದ್ದೆಗಳು ಪುರುಷರಿಗೆ ಹಾಗೂ ಮಹಿಳೆಯರಿಗೆ 2020 ಹುದ್ದೆ ಮೀಸಲಿವೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಎಸ್‌ಎಸ್‌ಸಿ ಪ್ರಕಟಿಸಲಿದೆ.

ಸಾಂದರ್ಭಿಕ ಚಿತ್ರ

ನವದೆಹಲಿ: ಫೆಬ್ರವರಿ 23 ರಿಂದ ಪ್ರಾರಂಭವಾಗಬೇಕಿದ್ದ ಜಿಡಿ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು (SSC GD Constable Exam 2026) ಕಾರಣಾಂತರಗಳಿಂದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಮುಂದೂಡಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ.

ಸುಮಾರು 25,000 ಜಿಡಿ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗೆ 2025ರ ಡಿಸೆಂಬರ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗೆ ಸದ್ಯ Exam Slot ಆಯ್ಕೆಗೆ ಅವಕಾಶವಿಲ್ಲ. ಪರೀಕ್ಷೆಯ 8 ರಿಂದ 10 ದಿನ ಮೊದಲು ಪರೀಕ್ಷಾ ಕೇಂದ್ರ ನಗರ (Exam Center City) ಮಾಹಿತಿ ಸಿಗಲಿದೆ ಹಾಗೂ 2-3 ದಿನ ಮೊದಲು ಪ್ರವೇಶ ಪತ್ರ ಬಿಡುಗಡೆಯಾಗಲಿದೆ.

ಬಿಎಸ್ಎಫ್, ಸಿಐಎಸ್ಎಫ್ ಸೇರಿ ವಿವಿಧ ಭದ್ರತಾ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದರಲ್ಲಿ 23,467 ಹುದ್ದೆಗಳು ಪುರುಷರಿಗೆ ಹಾಗೂ ಮಹಿಳೆಯರಿಗೆ 2020 ಹುದ್ದೆ ಮೀಸಲಿವೆ.

SSC

ಹುದ್ದೆಗಳ ಮಾಹಿತಿ

  • ಬಿಎಸ್ಎಫ್(BSF)- 616
  • ಸಿಐಎಸ್ಎಫ್(CISF)- 14,595
  • ಸಿಆರ್ಪಿಎಫ್ (CRPF)- 5,490
  • ಐಟಿಬಿಪಿ(ITBP)- 1,293
  • ಎಆರ್- 1,706
  • ಎಸ್ಎಸ್ಎಫ್(SSF)- 23 ಹುದ್ದೆಗಳಿವೆ.

SBI Recruitment 2026: ಎಸ್‌ಬಿಐಯ ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ ಹುದ್ದೆಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಕನ್ನಡದಲ್ಲೂ ಪರೀಕ್ಷೆ ಬರಲಿದೆ ಅವಕಾಶ

ಎಎಸ್‌ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ದಕ್ಷತೆಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.gov.in ಇಲ್ಲಿಗೆ ಭೇಟಿ ನೀಡಿ.