Bengaluru Stampede: ಚಿನ್ನಸ್ವಾಮಿ ಬಳಿ ಕಾಲ್ತುಳಿತ ; RCB ಮ್ಯಾನೇಜ್ಮೆಂಟ್ ಪ್ರತಿನಿಧಿಯನ್ನು ಬಂಧಿಸಲು ಸಿಎಂ ಸೂಚನೆ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರತಿಕ್ರಿಯೆ ನೀಡಿದ್ದಾರೆ. ಕಾಲ್ತುಳಿತಕ್ಕೆ ಕಾರಣರಾದವರನ್ನು ಬಂಧಿಸುವಂತೆ ಸಿಎಂ ಆದೇಶ ನೀಡಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.


ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ (Bengaluru Stampede) ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರತಿಕ್ರಿಯೆ ನೀಡಿದ್ದಾರೆ. ಕಾಲ್ತುಳಿತಕ್ಕೆ ಕಾರಣರಾದವರನ್ನು ಬಂಧಿಸುವಂತೆ ಸಿಎಂ ಆದೇಶ ನೀಡಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.
ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಗಿದೆ. ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲಾಗಿದೆ. ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಹೇಳಿದ್ದೇನು?
ನಿನ್ನೆ ನಡೆದ ಆರ್ಸಿಬಿ ವಿಜಯ ಯಾತ್ರೆಯನ್ನು ಕರ್ನಾಟಕ ಸರ್ಕಾರ ಆಯೋಜಿಸಿದ್ದು ಎಂದೇ ಎಲ್ಲರೂ ಭಾವಿಸಿದ್ದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಮಾಡಿದ್ದರಿಂದ ಇದು ಸರ್ಕಾರಿ ಕಾರ್ಯಕ್ರಮ ಎಂದೇ ಭಾವಿಸಲಾಗಿತ್ತು. ಆದರೆ, ತನ್ನ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ ಜೂನ್ 3ರಂದು ಬೆಂಗಳೂರಿನಲ್ಲಿ ಆರ್ಸಿಬಿ ವಿಜಯಯಾತ್ರೆ ಮತ್ತು ಸಂಭ್ರಮಾಚರಣೆ ಆಯೋಜಿಸುತ್ತೇವೆ ಎಂದು ಆರ್ಸಿಬಿಯ ಸಿಇಒ ತಿಳಿಸಿದ್ದರು. ಆದರೆ, ಈ ಬಗ್ಗೆ ದಯಾನಂದ್ ಅವರು ಆಯೋಜಕರಿಗೆ ಲಿಖಿತ ಉತ್ತರ ನೀಡಿ ಅನುಮತಿ ನಿರಾಕರಿಸಲು ವಿಫಲರಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ-ಕೆಎಸ್ಸಿಎ
ಸಮಯಾವಕಾಶ ಸಾಕಾಗುವುದಿಲ್ಲ ಎಂದು ಅವರು ಅನುಮತಿ ನಿರಾಕರಿಸಬೇಕಿತ್ತು ಎಂದು ಪ್ರಕಟಣೆಯಲ್ಲಿ ಕಾರಣ ನೀಡಲಾಗಿದೆ. ಆದರೆ, ಅರ್ಧ ದಿನದಲ್ಲಿ ಸಿದ್ಧತೆ ಮಾಡಿಕೊಳ್ಳಲು ಕಷ್ಟವಾಗುತ್ತದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಲಿಖಿತವಾಗಿ ಅನುಮತಿ ನಿರಾಕರಿಸಿದ್ದಾರೆ ಎಂಬ ಕಾರಣ ನೀಡಿ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ.