ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಸಂಪರ್ಕ ಮತ್ತು ಪ್ರಯಾಣಿಕರ ಅನುಭವ ಹೆಚ್ಚಿಸಲು ಕ್ರಮ
ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಹೊಂದಿದ್ದು, ಪ್ರಯಾಣಿಕರ ಪ್ರಯಾಣವನ್ನು ಹೆಚ್ಚು ಅನುಕೂಲಕರ ಮತ್ತು ಆನಂದದಾಯಕವಾಗಿಸಲಿದೆ. *ಈ ಕೆಳಗಿನ ವೈಶಿಷ್ಟ್ಯಗಳನ್ನು ಹೊಂದಿರಲಿದೆ: * ಕನ್ನಡದಲ್ಲಿ ನೈಜ-ಸಮಯದ ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆ ರಹಿತ ಮಾಹಿತಿ ಲಭ್ಯ.


ಬೆಂಗಳೂರು: ಕನ್ನಡ ಭಾಷೆಗೆ ಆದ್ಯತೆ ನೀಡುವ ಜೊತೆಗೆ ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸ ಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ.
ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಹೊಂದಿದ್ದು, ಪ್ರಯಾಣಿಕರ ಪ್ರಯಾಣವನ್ನು ಹೆಚ್ಚು ಅನುಕೂಲಕರ ಮತ್ತು ಆನಂದದಾಯಕವಾಗಿಸಲಿದೆ. *ಈ ಕೆಳಗಿನ ವೈಶಿಷ್ಟ್ಯಗಳನ್ನು ಹೊಂದಿರಲಿದೆ: * ಕನ್ನಡದಲ್ಲಿ ನೈಜ-ಸಮಯದ ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆರಹಿತ ಮಾಹಿತಿ ಲಭ್ಯ.
*ಯಾವುದೇ ಶ್ರಮವಿಲ್ಲದೆ ಪ್ರಯಾಣಿಕರು ವಿಮಾನಗಳನ್ನು ಕಾಯ್ದಿರಿಸಲು, ಸಾರಿಗೆ ಆಯ್ಕೆ ಮತ್ತು ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಅನ್ವೇಷಿಸಲು ಅನುವು.
*ಭದ್ರತಾ ಕಾರ್ಯವಿಧಾನ, ಬ್ಯಾಗೇಜ್ ನಿಯಮಗಳು, ಪ್ರಯಾಣಕ್ಕೆ ಬೇಕಾದ ಅನುಕೂಲತೆಯ ಮಾಹಿತಿಗಳು ಸೇರಿದಂತೆ ಹಲವು ವಿಚಾರಗಳು ಸ್ಥಳೀಯ ಭಾಷೆಯಲ್ಲಿ ದೊರೆಯಲಿದೆ.
*ಸಾಮಾನ್ಯ ಪ್ರಶ್ನೆಗಳನ್ನು ಪರಿಹರಿಸುವ ಸಮಗ್ರ FAQ, ಪ್ರಯಾಣ ಪ್ರಕ್ರಿಯೆಯನ್ನು ಸರಳ ಗೊಳಿಸು ತ್ತದೆ. ಈ ನೂತನ ಉಪಕ್ರಮದ ಬಗ್ಗೆ ಪ್ರತಿಕ್ರಿಯಿಸಿದ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಒ) ಹರಿ ಮಾರಾರ್ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಕೇವಲ ಸಾರಿಗೆ ಕೇಂದ್ರವಾಗಿರದೇ, ಸಾಕಷ್ಟು ಬೆಳೆದಿದೆ.
ಇದೀಗ ಸ್ಥಳೀಯ ಭಾಷೆಯಲ್ಲೇ ವಿಮಾನ ನಿಲ್ದಾಣದ ಸಂಪೂರ್ಣ ಮಾಹಿತಿಯನ್ನು ಪಡೆದು ಕೊಳ್ಳಲು ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸುವ ಮೂಲಕ ನಮ್ಮ ಭಾಷಾ ಪರಂಪರೆಯ ಶ್ರೀಮಂತಿಗೆ ಆದ್ಯತೆ ನೀಡಲಾಗಿದೆ” ಎಂದು ತಿಳಿಸಿದರು, ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷಾ ಆಯ್ಕೆಯ ಪರಿಚಯವು ವಿಮಾನ ನಿಲ್ದಾಣದಲ್ಲಿ ಕನ್ನಡದ ಪರಿಸರವನ್ನು ವೃದ್ಧಿಸಲಿದೆ. ವಿಮಾನ ನಿಲ್ದಾಣದ ದೀರ್ಘಕಾಲದ ಪ್ರಯತ್ನದೊಂದಿಗೆ ಭಾಷಾ ಆಯ್ಕೆಯನ್ನು ಅಳವಡಿಸಿಕೊಳ್ಳ ಲಾಗಿದೆ.
ಈಗಾಗಲೇ ವಿಮಾನ ನಿಲ್ದಾಣದಾದ್ಯಂತ ವಿಮಾನ ಮಾಹಿತಿ ಪ್ರದರ್ಶನ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ, ಅಂಗಡಿ ಮತ್ತು ಮಳಿಗೆಗಳ ನಾಮಫಲಕಗಳಿಂದ ಹಿಡಿದ ಸಿಬ್ಬಂದಿಗಳವರೆಗೆ ಎಲ್ಲೆಡೆ ಕನ್ನಡವನ್ನು ವಿಮಾನ ನಿಲ್ದಾಣ ಅಳವಡಿಸಿಕೊಂಡಿದೆ. ಕರ್ನಾಟಕದ ಸಂಸ್ಕೃತಿ ಮತ್ತು ನೀತಿಗಳನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣವನ್ನು ವಿನ್ಯಾಸಗೊಳಿಸಲಾಗಿದೆ.
ಈ ಡಿಜಿಟಲ್ ಟ್ರಾನ್ಸ್‌ಫರ್ಮೇಷನ್ ಉಪಕ್ರಮವು ಪ್ರಯಾಣಿಕರ ಅನುಕೂಲವನ್ನು ಹೆಚ್ಚಿಸಲು ಹಾಗೂ ಭಾಷಾ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಕೆಂಪೇಗೌಡ ಅಂತಾರಾ ಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಹೊಂದಿರುವ ಬದ್ಧತೆಯನ್ನು ಮತ್ತಷ್ಟು ವರ್ಧಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ, https://www.bengaluruairport.com/kn/ ಕನ್ನಡ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ .