ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

OM Shakthi: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆದ ಮೂವರು 'ಬಾಲಪಾತಕಿ'ಗಳ ಬಂಧನ

ಬೆಂಗಳೂರಿನ ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ನಾಲ್ಕೈದು ಜನ 15-17 ವರ್ಷದವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆದ ಮೂವರು 'ಬಾಲಪಾತಕಿ'ಗಳ ಬಂಧನ

ಜಿ ಪರಮೇಶ್ವರ -

ಹರೀಶ್‌ ಕೇರ
ಹರೀಶ್‌ ಕೇರ Jan 5, 2026 10:22 AM

ಬೆಂಗಳೂರು, ಜ.05 : ಬೆಂಗಳೂರಿನಲ್ಲಿ (Bengaluru) ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಚಾಮರಾಜಪೇಟೆ ಸಮೀಪದ ಜೆಜೆಆರ್ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ (OM Shakthi) ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿದರು. ನಾಲ್ಕೈದು ಜನ ಚಿಕ್ಕ ಹುಡುಗರು, 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ಏನಿದು ಘಟನೆ?

ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಿನ್ನೆ ರಾತ್ರಿ ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದರು. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿತ್ತು. ಇದೀಗ ಜೆಜೆಆರ್‌ ನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Stone Pelting: ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ