ಬೆತ್ತಲೆ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ; ಬೆಂಗಳೂರಿನಲ್ಲಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ
Bengaluru News: ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ಘಟನೆ ನಡೆದಿದೆ. ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಜಗನ್ ಮೋಹನ್. -
ಬೆಂಗಳೂರು, ಡಿ.11: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು (Bengaluru News) ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ಈತ, ಕಾಲೇಜು ಸಮೀಪದ ಶಾಂತಿನಗರದಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದ. ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಮೃತ ವಿದ್ಯಾರ್ಥಿ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವಿಡಿಯೋ ಕಾಲ್ ಮೂಲಕ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಜತೆಗೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲೊಂದು ಘೋರ ದುರಂತ: ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು
ತಾಯಿಗೆ ಬೈಯ್ದಿದ್ದಕ್ಕೆ ಸ್ವಂತ ಅಣ್ಣನನ್ನೇ ಕೊಲೆಗೈದ ತಮ್ಮ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ. ತಾಯಿಗೆ ಬೈಯ್ದಿದ್ದಕ್ಕೆ ಸ್ವಂತ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವುದು ಬೆಂಗಳೂರಿನ ಯಾರಬ್ ನಗರದಲ್ಲಿ ನಡೆದಿದೆ. ಮಹಮ್ಮದ್ ಮುಜಾಹಿದ್ (35) ಕೊಲೆಯಾದ ವ್ಯಕ್ತಿ.
ಮುಜಾಹೀದ್ ತಮ್ಮ ಮೊಹಮ್ಮದ್ ಮುಸೆದ್ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ್ದಾನೆ. ತಾಯಿಗೆ ಬೈದ ಎನ್ನುವ ವಿಚಾರಕ್ಕೆ ಅಣ್ಣ-ತಮ್ಮ ನಡುವೆ ಹೊಡೆದಾಟ ಆಗಿದೆ. ಮನೆಯಲ್ಲಿ ಇದ್ದ ವಸ್ತುಗಳಿಂದ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಮುಜಾಹಿದ್‌ನನ್ನು ಮುಸೆದ್ ಹತ್ಯೆಗೈದಿದ್ದಾನೆ. ಗಾಯಗೊಂಡ ಮುಸೆದ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.