ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಮುನ್ನೆಲೆಗೆ ಬಂದಿದ್ದು, ಸರ್ಕಾರ ಹಿಜಾಬ್‌ ಸೇರಿದಂತೆ ಜನಿವಾರ, ರುದ್ರಾಕ್ಷಿಯನ್ನು ಹಾಕಲು ಅನುಮತಿ ನೀಡಿದೆ. ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಎಂದು ಸರ್ಕಾರ ಅನುಮತಿ ನೀಡಿದೆ.

ಸಂಗ್ರಹ ಚಿತ್ರ

ಮೈಸೂರು: ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ (Hijab Row) ಮುನ್ನೆಲೆಗೆ ಬಂದಿದ್ದು, ಸರ್ಕಾರ ಹಿಜಾಬ್‌ ಸೇರಿದಂತೆ ಜನಿವಾರ, ರುದ್ರಾಕ್ಷಿಯನ್ನು ಹಾಕಲು ಅನುಮತಿ ನೀಡಿದೆ. ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ (CM Siddaramaiah) ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನ ಮೈಸೂರಿನಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ಮೋದಿ ಮಿತವ್ಯಯ ಸೂತ್ರ ನಾವೂ ಪಾಲಿಸುತ್ತೇವೆ; ಆರ್‌ ಅಶೋಕ್‌

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಿತವ್ಯಯ ಸೂತ್ರ ಪಾಲನೆಗೆ ಕರೆ ನೀಡಿದ್ದು, ನಾವೂ ಮೋದಿಯವರ ಕರೆಗೆ ಬೆಂಬಲಿಸಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶೇ.30ರಿಂದ ಶೇ.40ರಷ್ಟು ವಾಹನಗಳ ಬಳಕೆ ಕಡಿಮೆ ಮಾಡಲಿದ್ದು, ದಿನ ಬಿಟ್ಟು ದಿನ ಬೆಂಗಾವಲು ವಾಹನಗಳ ಬಳಕೆಗೆ ತೀರ್ಮಾನ ಮಾಡಿದ್ದೇವೆ. ಮದುವೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ತೆರಳಿದ ಸಂದರ್ಭದಲ್ಲಿ ಎಲ್ಲ ವಾಹನಗಳನ್ನು ಬಳಕೆ ಮಾಡುವುದಿಲ್ಲ. ಇದಕ್ಕೆ ನಮ್ಮ ಮನೆಯ ಸದಸ್ಯರು ಬೆಂಬಲಿಸಿದ್ದಾರೆ. ಪ್ರಧಾನಿಯವರ ಮನವಿಗೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ ಅವರು, ಮನೆಯಲ್ಲಿ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡಲು ನಾನು ನನ್ನ ಮನೆಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್‌; ಸರ್ಕಾರದ ನಡೆಗೆ ಸಿಡಿದೆದ್ದ ಬಿಜೆಪಿ

ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಈಗಾಗಲೇ ಪ್ರಧಾನಿಯವರ ಕರೆಗೆ ಸ್ಪಂದಿಸಿದ್ದು ಮೆಟ್ರೋದಂತಹ ಸಾಮೂಹಿಕ ಸಾರಿಗೆ ವ್ಯವಸ್ಥೆಗಳನ್ನು ಬಳಸಲು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಕೋಟಾವನ್ನು ಹಠಾತ್ತನೆ ಕಡಿಮೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಅಶೋಕ ಆರೋಪಿಸಿದರು.

Vishakha Bhat Heggar

View all posts by this author