ಬೆಂಗಳೂರು, ಫೆ.13: 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.
2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 28.02.2026 ರಿಂದ 17.03.2026 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ.
ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 28.02.2026 ರಿಂದ 17.03.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
Chikkaballapur News: ಮಹಾಶಿವರಾತ್ರಿ ಹಾಗೂ ನಂದಿ ಜಾತ್ರೆಗೆ ಹರಿಕೃಷ್ಣ ಫೌಂಡೇಷನ್ ವತಿಯಿಂದ ಉಚಿತ ಆಟೋ ಸೇವೆ
ಪಿ.ಯು.ಸಿ ಪರೀಕ್ಷೆ-1 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡುವಂತೆ ರಾಜ್ಯಗಳಿಗೆ ಸುಪ್ರೀಂ ಸೂಚನೆ