ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Excise Department: ರಾಜ್ಯ ಸರ್ಕಾರಕ್ಕೆ ಅಬಕಾರಿ ಸುಧಾರಣೆ ವರದಿ ಸಲ್ಲಿಕೆ; ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು

Liquor price: ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಸಾರ್ವಜನಿಕ ಆರೋಗ್ಯ ತಜ್ಞರು, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾಮಾನ್ಯ ನಾಗರಿಕರು ಸೇರಿದಂತೆ ಎಲ್ಲಾ ಆಸಕ್ತ ಪಾಲುದಾರರು ವರದಿಯನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯಗಳನ್ನು ಮೇ 22ರರೊಳಗೆ ಸಲ್ಲಿಸಲು ರಾಜ್ಯ ಸರ್ಕಾರ ವಿನಂತಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ (RMC) ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯು ಅಸ್ತಿತ್ವದಲ್ಲಿರುವ ಚೌಕಟ್ಟಿನ ಸಮಗ್ರ ಪರಿಶೀಲನೆಯನ್ನು ಪ್ರಸ್ತುತಪಡಿಸಿದ್ದು, ಸಾರ್ವಜನಿಕ ಆರೋಗ್ಯ ದೃಷ್ಟಿಕೋನ ಹೊಂದಿದ, ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆಗೆ ವರ್ಗಾವಣೆಯನ್ನು ಶಿಫಾರಸು ಮಾಡಿದೆ. ಇದಕ್ಕೆ ಹಂತ ಹಂತವಾಗಿ ಜಾರಿಗೊಳಿಸುವ ಸುಧಾರಣಾ ಮಾರ್ಗಸೂಚಿ ಹಾಗೂ ತಂತ್ರಜ್ಞಾನ ಆಧಾರಿತ ನಿಯಂತ್ರಣ ಕ್ರಮಗಳು ಬೆಂಬಲವಾಗಿವೆ.

ಈ ವರದಿಯನ್ನು ವ್ಯಾಪಕ ಪ್ರಚಾರ/ಸಮಾಲೋಚನೆಗಾಗಿ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕೃತ ವೆಬ್‌ಸೈಟ್ (finance.karnataka.gov.in) ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಸಾರ್ವಜನಿಕ ಆರೋಗ್ಯ ತಜ್ಞರು, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾಮಾನ್ಯ ನಾಗರಿಕರು ಸೇರಿದಂತೆ ಎಲ್ಲಾ ಆಸಕ್ತ ಪಾಲುದಾರರು ವರದಿಯನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯಗಳನ್ನು spobud-fd@karnataka.gov.in ಗೆ ಕಳುಹಿಸಲು ಕೋರಲಾಗಿದೆ. ಪಾಲುದಾರರು ತಮ್ಮ ಅಭಿಪ್ರಾಯಗಳನ್ನು ಮೇ 22ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಲು ವಿನಂತಿಸಲಾಗಿದೆ.

ಪಾನ ಪ್ರಿಯರಿಗೆ ಶಾಕ್; ಮದ್ಯದ ದರ ಶೇ.20 ಏರಿಕೆ ಸಾಧ್ಯತೆ

ಅಬಕಾರಿ ಸುಧಾರಣೆ ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ರಾಜ್ಯದ ಮದ್ಯ ಪ್ರಿಯರಿಗೆ ಶೀಘ್ರದಲ್ಲೇ ಬೆಲೆ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದ್ದು, ಗಾತ್ರದ ಬದಲಿಗೆ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ “Alcohol-in-Beverage (AIB-ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ)” ನೀತಿಯನ್ನು ಜಾರಿಗೆ ತರಲು ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿದೆ.

ಈ ಹೊಸ ನೀತಿಯ ಪ್ರಕಾರ, ಮದ್ಯದ ಬಾಟಲ್‌ನಲ್ಲಿ ಇರುವ ನಿಜವಾದ ಆಲ್ಕೋಹಾಲ್ ಅಂಶವನ್ನು ಆಧರಿಸಿ ತೆರಿಗೆ ನಿಗದಿಯಾಗಲಿದೆ. ಅಂದರೆ, ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ಇದರ ಪರಿಣಾಮವಾಗಿ ಸಾಮಾನ್ಯವಾಗಿ ಬಳಕೆಯಾಗುವ ಕಡಿಮೆ ಬೆಲೆಯ ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಸೇರಿದಂತೆ ಭಾರತೀಯ ಮದ್ಯದ ದರಗಳು ಶೇ.20ರಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ.

ಈಗಿರುವ ಪ್ರಮಾಣ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಬದಲಾಯಿಸಿ, ನಿಜವಾದ ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ ವಿಧಿಸುವ ಹೊಸ ಮಾದರಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಬದಲಾವಣೆ ಜಾರಿಯಾದರೆ ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ಇಂತಹ ತೆರಿಗೆ ವ್ಯವಸ್ಥೆ ಅನುಸರಿಸುವ ರಾಜ್ಯವಾಗಲಿದೆ.

ಈ ನೀತಿಯ ಪರಿಣಾಮವಾಗಿ ಕಡಿಮೆ ಬೆಲೆಯ ಮದ್ಯವು ಹೆಚ್ಚು ಪರಿಣಾಮಕ್ಕೊಳಗಾಗಲಿದೆ. ಈಗಾಗಲೇ MRP ಆಧಾರದ ಮೇಲೆ ವಿವಿಧ ಸ್ಲ್ಯಾಬ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದ್ದು, ಹೊಸ ವ್ಯವಸ್ಥೆ ಜಾರಿಯಾದಲ್ಲಿ ಕಡಿಮೆ ಆದಾಯ ವರ್ಗದವರು ಬಳಸುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ ಹೆಚ್ಚು ದುಬಾರಿ ಆಗಲಿದೆ.

Electricity Price Hike: ರಾಜ್ಯದ ಜನರಿಗೆ ವಿದ್ಯುತ್‌ ದರ ಏರಿಕೆ ಶಾಕ್‌ ನೀಡಿದ ಸರ್ಕಾರ; ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ಈ ವಿಭಾಗದ ಮದ್ಯಗಳಲ್ಲಿ ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ. 42.8ರಷ್ಟಿದೆ. ಇವೇ ನಾಲ್ಕು ಸ್ಲ್ಯಾಬ್‌ಗಳು ಒಟ್ಟು ಎಕ್ಸೈಸ್ ಆದಾಯದಲ್ಲಿ ಶೇ.80ರಷ್ಟು ಪಾಲು ಹೊಂದಿದ್ದು, ಕಳೆದ ವರ್ಷ 180 ಮಿಲಿ ಮದ್ಯದ ಬೆಲೆ 80ರಿಂದ 95 ರೂಪಾಯಿಗೆ ಏರಿಕೆಯಾಗಿತ್ತು. ಆದರೆ, ಹೊಸ ತೆರಿಗೆ ವ್ಯವಸ್ಥೆಯ ನಂತರ 105-110 ರೂ. ವರೆಗೆ ದರ ಏರಿಕೆಯಾಗುವ ಸಾಧ್ಯತೆಗಳಿವೆ. ಇದರಿಂದ ಮಧ್ಯಮ ಮತ್ತು ಕಡಿಮೆ ಆದಾಯದ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ.