ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಿಬಿಎಂಪಿ ಕಾಮಗಾರಿ ಅಕ್ರಮ; ಸಿಎಂಗೆ ತನಿಖಾ ವರದಿ ಸಲ್ಲಿಸಿದ ನಾಗಮೋಹನ ದಾಸ್ ಆಯೋಗ

BBMP work irregularities: ರ‍್ಯಾಂಡಮ್ ಆಯ್ಕೆ ಮೂಲಕ ಆಯ್ಕೆಯಾದ 528 ಮತ್ತು ಇತರೆ 233, ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಿ ವಿಚಾರಣಾ ಆಯೋಗವು ಹಲವು ನ್ಯೂನತೆಗಳನ್ನು ಪತ್ತೆ ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಬಿಬಿಎಂಪಿ ಕಾಮಗಾರಿ ಅಕ್ರಮ; ಸಿಎಂಗೆ ತನಿಖಾ ವರದಿ ಸಲ್ಲಿಸಿದ ಆಯೋಗ

-

Prabhakara R Prabhakara R Aug 30, 2025 7:07 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20 ರಿಂದ 2022-23 ರವರೆಗೆ ಕಾಮಗಾರಿಗಳ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ (BBMP work irregularities) ಕುರಿತಾದ ತನಿಖಾ ವರದಿಯನ್ನು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ವಿಚಾರಣಾ ಆಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ವರದಿಯಲ್ಲಿ ಶಿಫಾರಸು ಮಾಡಿದ್ದು, ಜತೆಗೆ ಸುಧಾರಣಾ ಕ್ರಮಕೈಗೊಳ್ಳಲು ಸಹ ಆಯೋಗವು ಶಿಫಾರಸು ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು 2023ರ ಜುಲೈ 13ರಂದು ಟಿಪ್ಪಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದರು.

ಬಳಿಕ 2023ರ ಆ.5ರಂದು ಸರ್ಕಾರದ ಆದೇಶದಲ್ಲಿ ತಜ್ಞರಗಳನ್ನೊಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಪರಿಪೂರ್ಣ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. 2023ರ ಡಿ.15ರಂದು ಸರ್ಕಾರದ ಆದೇಶದಲ್ಲಿ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ಹಿಂಪಡೆದು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ವಿಚಾರಣಾ ಆಯೋಗಕ್ಕೆ ತನಿಖೆಯನ್ನು ವರ್ಗಾಯಿಸಲಾಗಿತ್ತು.

2024ರ ಏಪ್ರಿಲ್‌ 20ರಂದು ಸರ್ಕಾರದ ಅಧಿಸೂಚನೆಯಲ್ಲಿ ಈ ತನಿಖೆಯನ್ನು ವಿಚಾರಣಾ ಆಯೋಗದ ಮತ್ತು ವಿಶೇಷ ತನಿಖಾ ಸಮಿತಿಗಳ ಪರಿಶೀಲನಾ ಅಂಶಗಳನ್ನು ಸಹ ಒಳಗೊಂಡಂತೆ ವಿಚಾರಣಾ ಆಯೋಗವು ತನಿಖೆಯನ್ನು ಮುಂದುವರಿಸುವುದು ಎಂದು ಸ್ಪಷ್ಟೀಕರಣ ನೀಡಿತ್ತು. ಈ ಹಿನ್ನೆಲೆಯಲ್ಲಿ, ಆಯೋಗವು ತನಿಖೆ ನಡೆಸಲು ಕೆಳಕಂಡ ಪರಿಶೀಲನಾ ಮಾರ್ಗವನ್ನು ಅನುಸರಿಸಿದೆ:

  1. ಕಾಮಗಾರಿಗಳ ಕಡತ ಪರಿಶೀಲನೆ
  2. ಕಾಮಗಾರಿಗಳ ಸ್ಥಳ ಪರಿಶೀಲನೆ
  3. ಕಾಮಗಾರಿಗಳ ಲೆಕ್ಕ ಪರಿಶೀಲನೆ

ರ‍್ಯಾಂಡಮ್ ಆಯ್ಕೆ ಮೂಲಕ ಆಯ್ಕೆಯಾದ 528 ಮತ್ತು ಇತರೆ 233, ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಿ ಹಲವು ನ್ಯೂನತೆಗಳನ್ನು ಪತ್ತೆ ಮಾಡಲಾಗಿದೆ.

ಅಂತಿಮವಾಗಿ ವಿಚಾರಣಾ ಆಯೋಗವು 2025ರ ಆ.30ರಂದು ಬಿಬಿಎಂಪಿ ಕಾಮಗಾರಿ ಅಕ್ರಮಗಳ ಕುರಿತಾದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.