Sudha Murthy: ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ- ನಾರಾಯಣ ಮೂರ್ತಿ ದಂಪತಿ ನಿರಾಕರಣೆ
Narayana murthy: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

-

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Socio Economic Survey) ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (NR Narayana murthy) ಹಾಗೂ ಸುಧಾ ಮೂರ್ತಿ (Sudha Murthy) ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿ ಸುಧಾ ಮೂರ್ತಿ ಅವರ ನಿವಾಸವಿದ್ದು, ಇಬ್ಬರೂ ಕರ್ನಾಟಕದ ನಿವಾಸಿಗಳಾಗಿದ್ದಾರೆ.
ಇದನ್ನೂ ಓದಿ: Sudha Murthy: ಗುರುರಾಯರ ಆರಾಧನೆ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಸುಧಾ ಮೂರ್ತಿ ಪೂಜೆ