ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suhas Shetty Murder Case: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ರಾಜ್ಯ ಬಿಜೆಪಿಯಿಂದ NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ

ಇತ್ತೀಚಿಗೆ ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (Suhas Shetty) ಕೊಲೆ ನಡೆದಿತ್ತು ಪ್ರಕರಣದ ಬಗೆಗಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ((NIA) ವಹಿಸಬೇಕಾಗಿ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ ಬಿಜೆಪಿಯ ಹಲವು ನಾಯಕರು ಈ ಕೃತ್ಯದ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ; ಬಿಜೆಪಿಯಿಂದ NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ

Profile Vishakha Bhat May 10, 2025 6:35 PM

ಬೆಂಗಳೂರು: ಇತ್ತೀಚಿಗೆ ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (Suhas Shetty Murder) ಕೊಲೆ ನಡೆದಿತ್ತು ಪ್ರಕರಣದ ಬಗೆಗಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ((NIA) ವಹಿಸಬೇಕಾಗಿ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ ಬಿಜೆಪಿಯ ಹಲವು ನಾಯಕರು ಈ ಕೃತ್ಯದ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈಗಾಗಲೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ ಹಾಗೂ ಕೊಲೆ ಮಾಡಲು ಮೂರು ತಿಂಗಳ ಮುಂಚಿತವಾಗಿಯೇ ಪ್ಲಾನ್‌ ಮಾಡಲಾಗಿತ್ತು ಎಂದು ತನಿಖೆಯ ವರದಿಯಿಂದ ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಗೆ ವಹಿಸಬೇಕಾಗಿ ರಾಜ್ಯ ಬಿಜೆಪಿ (BJP) ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಸೇರಿ ರಾಜ್ಯಪಾಲರಿಗೆ ನಾಲ್ಕು ಪುಟಗಳಷ್ಟು ಕೈ ಬರಹದಲ ರೂಪದಲ್ಲೇ ಮನವಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಮೇ 1ರ ಗುರುವಾರದಂದು ರಾತ್ರಿ ಮಂಗಳೂರು ಸಮೀಪವಿರುವ ಬಜ್ಪೆ ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರಿಂದ ಈಗಾಗಲೇ 8 ಆರೋಪಿಗಳ ಬಂಧನ ಆಗಿದೆ.

ಕೃತ್ಯ ಎಸಗಲು ಮೂರು ತಿಂಗಳ ಹಿದೆಯ ಪ್ರೀ ಪ್ಲ್ಯಾನ್:‌

ಮೂರು ತಿಂಗಳ ಹಿಂದೆಯೇ ಸುಹಾಸ್‌ ಶೆಟ್ಟಿ ಕೊಲೆ ಮಾಡಲು ಪ್ಲ್ಯಾನ್‌ ಆಗಿತ್ತು ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ನೀಡಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಸಿದ್ದ. ಒಂದು ವೇಳೆ ಸುಹಾಸ್ ಶೆಟ್ಟಿ ಪಾರಾದರೆ ಇನ್ನೊಂದು ಪ್ಲಾನ್‌ ಕೂಡ ಸಿದ್ದವಾಗಿತ್ತು ಎನ್ನುವ ಮಾಹಿತಿ ಲಭ್ಯ ಆಗಿದೆ.