ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru Airport) ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಏರ್‌ಪೋರ್ಟ್‌ನ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಸಂದೇಶ ಕಳುಹಿಸಿದ್ದಾರೆ.
ಮೂರು ಆರ್‌ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. gaina-ramesh@outlook.com ಹೆಸರಿನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಎಚ್ಚೆತ್ತ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಏರ್ ಪೋರ್ಟ್ ನಲ್ಲಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ; ಕೇಸ್ ದಾಖಲು
ಗಾಂಜಾ ಮತ್ತು ಸಿಂಥೆಟಿಕ್ ಡ್ರಗ್ ಪೂರೈಕೆ; ಮತ್ತೊಬ್ಬ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಮತ್ತು ಸಿಂಥೆಟಿಕ್ ಡ್ರಗ್ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪೊಲೀಸರು ಮತ್ತೊಬ್ಬ ಉದ್ಯಮಿಯನ್ನು ಅರೆಸ್ಟ್ ಮಾಡಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸರು ಉದ್ಯಮಿ ಶಿವರಾಜನನ್ನು ಬಂಧಿಸಲಾಗಿದೆ.
ದಾವಣಗೆರೆಯ ಎಸ್‌ಎಸ್ ಲೇಔಟ್ ನಿವಾಸಿಯಾಗಿರುವ ಶಿವರಾಜ್ ಈ ಹಿಂದೆ ಆರ್‌ಟಿಓ ಕಚೇರಿಯಲ್ಲಿ ಏಜೆಂಟ್ ಆಗಿದ್ದ. ಸಂಘಟನೆ ಒಂದರಲ್ಲಿ ಆರೋಪಿ ಶಿವರಾಜ್ ಗುರುತಿಸಿಕೊಂಡಿದ್ದ. ಈಗಾಗಲೇ ಉದ್ಯಮಿ ಶಾಮನೂರು ವೇದಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೇದಮೂರ್ತಿಯನ್ನು ಇದೇ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಇದುವರೆಗೂ 11 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆಯ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಮತ್ತು ಸಿಂಥೆಟಿಕ್ ಡ್ರಗ್ ಪ್ರಕರಣ ದಾಖಲಾಗಿತ್ತು.