ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಪಲೋಕಾಯುಕ್ತರಿಂದ ಸ್ವಪ್ರೇರಿತ ದೂರು: ವಿದ್ಯಾರ್ಥಿಗಳಿಗೆ ಕಳಪೆ ಶೂ, ಲೋಕಾ ತನಿಖೆಗೆ ಆದೇಶ

ಹಿಂದಿನ ವರ್ಷಗಳ ಪೂರೈಕೆಗೆ ಹೋಲಿಸಿದರೆ ಈ ಬಾರಿ ಖರೀದಿಸಲಾದ ಪಾದರಕ್ಷೆಗಳು ಕಳಪೆಯಾಗಿದ್ದು, ಖರೀದಿ ಪ್ರಕ್ರಿಯೆ ಹಾಗೂ ಮೇಲ್ವಿಚಾರಣೆಯಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವು ದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿರುವುದನ್ನು ನ್ಯಾಯಮೂರ್ತಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಳಪೆ ಶೂ, ಲೋಕಾ ತನಿಖೆಗೆ ಆದೇಶ

-

Profile
Ashok Nayak Sep 12, 2026 9:16 AM

ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯ ಮೂರ್ತಿ ಕೆ.ಎನ್.ಫಣೀಂದ್ರ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ. ಮಕ್ಕಳ ಕಲ್ಯಾಣ ಯೋಜನೆಯಲ್ಲಿ ನಡೆದಿರುವ ಈ ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಹಿಂದಿನ ವರ್ಷಗಳ ಪೂರೈಕೆಗೆ ಹೋಲಿಸಿದರೆ ಈ ಬಾರಿ ಖರೀದಿಸಲಾದ ಪಾದರಕ್ಷೆಗಳು ಕಳಪೆ ಯಾಗಿದ್ದು, ಖರೀದಿ ಪ್ರಕ್ರಿಯೆ ಹಾಗೂ ಮೇಲ್ವಿಚಾರಣೆಯಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವು ದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿರುವುದನ್ನು ನ್ಯಾಯಮೂರ್ತಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ: Lokayukta Raid: ಎರಡೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ; ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

ರಾಜ್ಯದ 15 ಜಿಲ್ಲೆಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಪಿಐ) ಹಾಗೂ ಬ್ಲಾಕ್ ಶಿಕ್ಷಣ ಅಧಿಕಾರಿ ಗಳ (ಬಿಇಒ) ವಿರುದ್ಧ ಔಪಚಾರಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಬಂಧ ಪಟ್ಟ ಜಿಲ್ಲೆಗಳ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ (ಎಸ್ಪಿ) ಈ ಕುರಿತು ಸಮಗ್ರ ತನಿಖೆ ನಡೆಸಿ ಎರಡು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕೆಲವೇ ದಿನಗಳಲ್ಲಿ ಹರಿದ ಶೂ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ವಿತರಿಸಲಾದ ಶೂಗಳು ಬಳಕೆಗೆ ಯೋಗ್ಯವಾಗಿಲ್ಲ ಎಂಬ ದೂರುಗಳು ಹಲವು ಕಡೆಗಳಿಂದ ಕೇಳಿ ಬಂದಿವೆ. ಕೆಲವು ವರದಿ ಗಳ ಪ್ರಕಾರ, ಹೊಸ ಶೂಗಳನ್ನು ಧರಿಸಿದ ಕೆಲವೇ ದಿನಗಳಲ್ಲಿ ಅವು ಹರಿದು ಹೋಗಿರುವುದು ಹಾಗೂ ಕೆಲವು ಸಂದರ್ಭಗಳಲ್ಲಿ ಅಲ್ಪಾವಧಿಯ ಬಳಕೆಯ ಹೊಲಿಗೆಗಳು ಬಿಚ್ಚಿಕೊಂಡಿರುವ ಆರೋಪ ಗಳು ಕೇಳಿಬಂದಿವೆ.

ಈ ಬೆಳವಣಿಗೆ ಕೇವಲ ಉತ್ಪನ್ನದ ಗುಣಮಟ್ಟದ ಪ್ರಶ್ನೆಯಲ್ಲ. ಸಾರ್ವಜನಿಕ ಹಣದಲ್ಲಿ ಖರೀದಿಸಿದ ವಸ್ತು ಮಕ್ಕಳಿಗೆ ವಿತರಿಸುವ ಮೊದಲು ಅದರ ಗುಣಮಟ್ಟ ವನ್ನು ಯಾರು ಪರಿಶೀಲಿಸಿದರು? ನಿಗದಿತ ಮಾನದಂಡಗಳನ್ನು ಪೂರೈಸದಿದ್ದರೆ ಅದನ್ನು ಸ್ವೀಕರಿಸಿದವರು ಯಾರು? ಸರಬರಾಜು ದಾರನ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಯಿತು? ಎಂಬ ಪ್ರಶ್ನೆಗಳು ಈಗ ಪ್ರಮುಖವಾಗಿವೆ ಎಂದು ಹೇಳಲಾಗಿದೆ.