ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶ್ರೀ ರವಿಶಂಕರ್‌ಗೆ ಸುಪ್ರೀಂ ರಿಲೀಫ್: 5 ಕೋಟಿ ಮರುಪಾವತಿ

ಶ್ರೀ ಶ್ರೀ ರವಿಶಂಕರ್ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸಂತೋಷದ ಸುದ್ದಿ ನೀಡಿದೆ. 2016ರ ಪರಿಸರ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿದ್ದ 5 ಕೋಟಿ ರು. ದಂಡ ಮರುಪಾವತಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2016ರಲ್ಲಿ ನಡೆದ ವಿಶ್ವ ಸಂಸ್ಕೃತಿ ಉತ್ಸವದಿಂದ ಯಮುನಾ ನದಿಯ ಸೂಕ್ಷ್ಮಪರಿಸರ ವ್ಯವಸ್ಥೆಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು

ಶ್ರೀ ರವಿಶಂಕರ್‌ಗೆ ಸುಪ್ರೀಂ ರಿಲೀಫ್: 5 ಕೋಟಿ ಮರುಪಾವತಿ

-

Profile
Ashok Nayak Aug 23, 2026 10:22 AM

ಬೆಂಗಳೂರು: ಶ್ರೀ ಶ್ರೀ ರವಿಶಂಕರ್ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸಂತೋಷದ ಸುದ್ದಿ ನೀಡಿದೆ. 2016ರ ಪರಿಸರ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿದ್ದ 5 ಕೋಟಿ ರು. ದಂಡ ಮರುಪಾವತಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

2016ರಲ್ಲಿ ನಡೆದ ವಿಶ್ವ ಸಂಸ್ಕೃತಿ ಉತ್ಸವದಿಂದ ಯಮುನಾ ನದಿಯ ಸೂಕ್ಷ್ಮಪರಿಸರ ವ್ಯವಸ್ಥೆಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 2017ರಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ 5 ಕೋಟಿ ರು. ದಂಡ ವಿಧಿಸಿತ್ತು.

ಇದನ್ನೂ ಓದಿ: Dr Ravishankar A K Column: ಯುದ್ಧ ಮುಗಿಯದು