ಸಿಎಂ ವಿಜಯ್ಗೆ ಸುಪ್ರೀಂ ಕೋರ್ಟ್ ಶಾಕ್; ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ
Mekedatu Project: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ಹಿಂದಿನ ಸರ್ಕಾರಗಳ ಬಳಿಕ ಇದೀಗ ಮೇಕೆದಾಟು ಯೋಜನೆಗೆ ತಮಿಳುನಾಡು ನೂತನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸಹ ಅಡ್ಡಗಾಲು ಹಾಕುತ್ತಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು (Mekedatu Project) ನಿರ್ಮಾಣದ ಕರ್ನಾಟಕದ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಮಹತ್ವದ ಯೋಜನೆಗೆ ಇದಾಗಿದ್ದು, ಈ ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅರ್ಜಿಯನ್ನು ಸುಪ್ರೀಂಕೋರ್ಟ್ 2025 ನವೆಂಬರ್ನಲ್ಲಿ ವಜಾಗೊಳಿಸಿತ್ತು. ಇದೀಗ ಈ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ತೀರ್ಪಿನ ಪುನರ್ ಪರಿಶೀಲನೆ ಅಗತ್ಯ ಇಲ್ಲ ಎಂದು ಪೀಠ ತಿಳಿಸಿದೆ.
ಹಿಂದಿನ ಸರ್ಕಾರಗಳ ಬಳಿಕ ಇದೀಗ ಮೇಕೆದಾಟು ಯೋಜನೆಗೆ ತಮಿಳುನಾಡು ನೂತನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸಹ ಅಡ್ಡಗಾಲು ಹಾಕುತ್ತಿದ್ದಾರೆ. ಕರ್ನಾಟಕದ ಪ್ರಸ್ತಾವನೆಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಕ್ಕೆ ಉದ್ದೇಶಿತ ಭೂಮಿ ಪೂಜೆ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕೇಂದ್ರ ಹಾಗೂ ಕರ್ನಾಟಕದ ರಾಜಕೀಯ ಸಮೀಕರಣಗಳ ನಡುವೆಯೂ, ಮೇಕೆದಾಟು ವಿಷಯದಲ್ಲಿ ತಮಿಳುನಾಡು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಸಿಎಂ ವಿಜಯ್ ನೇತೃತ್ವದ ಈ ಸಭೆಯ ಮೂಲಕ ರವಾನಿಸಲಾಗಿದೆ.
ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧ: ನಿಖಿಲ್ ಕುಮಾರಸ್ವಾಮಿ
ಏನಿದು ಮೇಕೆದಾಟು ಯೋಜನೆ?
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣ ಮಾಡಿ, ಮಳೆಗಾಲದ ಸಂದರ್ಭದಲ್ಲಿ ಸಮುದ್ರ ಪಾಲಾಗುವ ಅಂದಾಜು 65-66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬೇಕು ಎಂಬುದು ರಾಜ್ಯದ ಉದ್ದೇಶ. ಅಷ್ಟೇ ಅಲ್ಲದೆ ರಾಜ್ಯಕ್ಕೆ ಅಗತ್ಯವಿರುವ ವಿದ್ಯುತ್ ಉತ್ಪಾದನೆಗೂಈ ಯೋಜನೆಯಿಂದ ಅನುಕೂಲವಾಗಲಿದೆ.