ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suspected Blast: ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ; ಬಾಲಕ ಸಾವು, 12 ಜನರ ಸ್ಥಿತಿ ಗಂಭೀರ

ವಿಲ್ಸನ್‌ ಗಾರ್ಡ್‌ನ (Bengaluru Blast) ಚಿನ್ನಯ್ಯನ ಪಾಳ್ಯದ ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತುವೊಂದು ಭಾರೀ ಸ್ಫೋಟಗೊಂಡಿದ್ದು, ಪರಿಣಾಮ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ; ಬಾಲಕ ಸಾವು

Vishakha Bhat Vishakha Bhat Aug 15, 2025 12:20 PM

ಬೆಂಗಳೂರು: ವಿಲ್ಸನ್‌ ಗಾರ್ಡ್‌ನ ಚಿನ್ನಯ್ಯನ ಪಾಳ್ಯದ (Suspected Blast) ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತುವೊಂದು ಭಾರೀ ಸ್ಫೋಟಗೊಂಡಿದ್ದು, ಪರಿಣಾಮ ಬಾಲಕ ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ.

ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್​ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ.

ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು. ಸ್ಫೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.

ಈ ಸುದ್ದಿಯನ್ನೂ ಓದಿ: IED Blast: ಒಡಿಶಾದಲ್ಲಿ ಮಾವೋವಾದಿಗಳಿಂದ ಐಇಡಿ ಸ್ಫೋಟ; ರೈಲ್ವೆ ಸಿಬ್ಬಂದಿ ಸಾವು

ಏಳು-ಎಂಟು ಗಂಟೆಗೆ ಸ್ಫೋಟ ಸಂಭವಿಸಿತು. ಏನಾಗಿದೆ ಅಂತಾನೆ ಗೊತ್ತಿಲ್ಲ. ದೊಡ್ಡ ಶಬ್ಧ ಬಂದಿತು. ಸಿಲಿಂಡರ್‌ ಸ್ಫೋಟ ಆಗಿದ್ದರೆ ಬೆಂಕಿ ಬರಬೇಕಿತ್ತು. ಬೆಂಕಿ ಬಂದಿಲ್ಲ ಏಕಾಏಕಿ ಅವಘಡ ಸಂಭವಿಸಿದೆ. ಕರೆಂಟ್‌ ಶಾಕ್‌ನಿಂದ ಹೀಗೆ ಆಗಿದ್ಯಾ ಅಥವಾ ಮೆಟ್ರೋ ಕಾಮಗಾರಿ ಇಲ್ಲಿ ನಡೆಯುತ್ತಿದೆ ಅದರಿಂದ ತೊಂದರೆಯಾಗಿದ್ಯಾ ಗೊತ್ತಾಗಿಲ್ಲ ಎಂದು ಜನರು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ಅನೇಕ ಜನರು ಲಾಲ್ ಬಾಗ್‌ನಲ್ಲಿ ಕೆಲಸ ಮಾಡುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೆ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.