ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʼಐ ಲವ್ ಮುಹಮ್ಮದ್ʼ ಅಭಿಯಾನದಿಂದ ಸಾಮರಸ್ಯಕ್ಕೆ ಧಕ್ಕೆ; ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಕಿಡಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ʼಐ ಲವ್ ಮುಹಮ್ಮದ್ʼ ಎಂಬ ಹೆಸರಿನಲ್ಲಿ ಕೆಲವು ಮತಾಂಧರು ನಡೆಸುತ್ತಿರುವ ಚಟುವಟಿಕೆಗಳಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಹಿಂದೂ ಸಮಾಜದ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಶುಕ್ರವಾರ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ʼಐ ಲವ್ ಮುಹಮ್ಮದ್ʼ (I Love Muhammad) ಎಂಬ ಹೆಸರಿನಲ್ಲಿ ಕೆಲವು ಮತಾಂಧರು ನಡೆಸುತ್ತಿರುವ ಚಟುವಟಿಕೆಗಳಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಹಿಂದೂ ಸಮಾಜದ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಶುಕ್ರವಾರ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ʼಐ ಲವ್ ಮುಹಮ್ಮದ್ʼ ಅಭಿಯಾನ ಹೆಸರಿನಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ, ಹಲ್ಲೆ ಮತ್ತು ಭಯೋತ್ಪಾದಕ ಕೃತ್ಯಗಳು ನಡೆದಿರುವುದನ್ನು ಉಲ್ಲೇಖಿಸಲಾಗಿದೆ. ಇಂತಹ ಕೃತ್ಯಗಳು ರಾಜ್ಯದ ಶಾಂತಿ ಹಾಗೂ ಸಾಮರಸ್ಯಕ್ಕೆ ದೊಡ್ಡ ಸವಾಲು ಎಸೆದಿವೆ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ. ಇಂತಹ ಘಟನೆಗಳು ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಸಹ ಗಲಭೆಗಳಿಗೆ ಕಾರಣವಾಗಿರುವುದರಿಂದ, ಕರ್ನಾಟಕದಲ್ಲಿಯೂ ಕೂಡ ತಕ್ಷಣದ ಕ್ರಮ ಅಗತ್ಯವಿದೆ ಎಂದು ಪದಾಧಿಕಾರಿಗಳು ಆಗ್ರಹಿಸಿದರು.

ಮನವಿಯಲ್ಲಿ ಒತ್ತಾಯಿಸಿರುವ ಸಮಿತಿಯ ಪ್ರಮುಖ ಬೇಡಿಕೆಗಳು

  • ʼಐ ಲವ್ ಮುಹಮ್ಮದ್ʼ ನೆಪದಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಿದ ಆರೋಪಿಗಳನ್ನು ಹಾಗೂ ಅವರ ಹಿಂಬಾಲಕರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  • ದಾಳಿಕೋರರಿಂದಲೇ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಉಂಟಾದ ನಷ್ಟವನ್ನು ವಸೂಲಿ ಮಾಡುವ ನೀತಿ ಅನುಸರಿಸಬೇಕು.
  • ಹಿಂದೂ ಹಬ್ಬಗಳ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಉಂಟುಮಾಡುವವರ ವಿರುದ್ಧ NSA ಮತ್ತು UAPA ಕಾಯಿದೆಗಳಡಿ ಕ್ರಮ ಕೈಗೊಳ್ಳಬೇಕು.
  • ದ್ವೇಷಪೂರಿತ ಬೋಧನೆ ನೀಡುವ ಮಸೀದಿಗಳು, ಮದರಸಾಗಳು ಅಥವಾ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.
  • ಮುಂದಿನ ದೀಪಾವಳಿ ಸೇರಿದಂತೆ ಪ್ರಮುಖ ಹಬ್ಬಗಳಲ್ಲಿ ಇಂತಹ ಅಶಾಂತಿ ತಡೆಗಟ್ಟಲು ಪೊಲೀಸ್ ಇಲಾಖೆ ಮುಂಚಿತ ಕ್ರಮ ಕೈಗೊಳ್ಳಬೇಕು.
  • ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವರುಗಳು ಹಾಗೂ ರಾಷ್ಟ್ರಪುರುಷರ ಚಿತ್ರಗಳಿರುವ ಪಟಾಕಿಗಳನ್ನು ಮಾರಾಟ ಮಾಡುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಮಿತಿಯವರು ತಿಳಿಸಿದ್ದಾರೆ. ‌

ಈ ಸುದ್ದಿಯನ್ನೂ ಓದಿ | BY Vijayendra: ಜಿಬಿಎ ಚುನಾವಣೆಗೆ ಎಲ್ಲಿದೆ ರಾಜ್ಯ ಸರ್ಕಾರದ ತಯಾರಿ? ಬಿ.ವೈ. ವಿಜಯೇಂದ್ರ ಪ್ರಶ್ನೆ

ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಸುರೇಶ್ ಆರ್, ಶ್ರೀರಾಮ ಸೇನೆಯ ಸುಂದ್ರೇಶ ನರ್ಗಲ್, ಆಜಾದ್ ಬ್ರಿಗೇಡ್‌ನ ಆನಂದ ಕುಮಾರ್ ಎಂ.ಪಿ., ವಕೀಲರಾದ ಸೌ. ಶಕುಂತಲಾ ಶೆಟ್ಟಿ, ರಾಷ್ಟ್ರೀಯ ಹಿಂದೂ ಪರಿಷತ್‌ನ ಸುರೇಶ್ ಗೌಡ, ಹಿಂದೂ ಹ್ಯೂಮನ್ ರೈಟ್ಸ್ ಸಂಘಟನೆಯ ಮಲ್ಲಿಕಾರ್ಜುನ ರಾಜು, ದುರ್ಗಾ ಸೇನೆಯ ಸರಸ್ವತಿ ಪ್ರವೀಣ ಮತ್ತಿತರರು ಉಪಸ್ಥಿತರಿದ್ದರು.