ಬೆಂಗಳೂರು: 77ನೇ ವಸಂತಕ್ಕೆ ಕಾಲಿಟ್ಟಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ರಾಜ್ಯ ಹಾಗೂ ಕೇಂದ್ರ ಪ್ರಮುಖ ರಾಜಕೀಯ ನಾಯಕರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಈ ಪೈಕಿ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ (M.K.Stalin) ಅವರು ಸಿದ್ದರಾಮಯ್ಯ ಅವರಿಗೆ ಕನ್ನಡದಲ್ಲೇ ಶುಭ ಹಾರೈಸಿರುವುದು ಕಂಡುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಂ.ಕೆ ಸ್ಟಾಲಿನ್ ಅವರು, ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವರು. ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು. @Siddaramaiah ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
— M.K.Stalin (@mkstalin) August 3, 2025
ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ… pic.twitter.com/2Q13WobUEW
ಡಿಸಿಎಂ ಡಿ.ಕೆ.ಶಿವಕುಮಾರ್ ಶುಭಾಶಯ
ಸಿದ್ದರಾಮಯ್ಯ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶುಭಾಶಯ ಕೋರಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | CM Siddaramaiah: ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ