ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಿಸಲು ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸಬೇಕು: ಜಸ್ಟಿಸ್ ಸಂತೋಷ್ ಹೆಗ್ಡೆ

ಸಂತೋಷ್ ಹೆಗಡೆ ಅವರು ಮಾತನಾಡಿ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸುಂದರ ಭವಿಷ್ಯ ರೂಪಿ ಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ. ಪಠ್ಯದ ಕಲಿಕೆಯ ಜೊತೆ ಜೊತೆಗೆ ಮೌಲ್ಯ ಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು ಅತ್ಯಗತ್ಯ ಎಂದು ಹೇಳಿದರು.

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸುಂದರ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ

ಬಸವೇಶ್ವರ ಶಿಕ್ಷಣ ಸಂಸ್ಥೆಯ 24ನೇ ವರ್ಷದ ಶಾಲಾ ವಾರ್ಷಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಚಾಲನೆ ನೀಡಿದರು

Profile Ashok Nayak Jan 26, 2025 8:49 PM

ಬೆಂಗಳೂರು: ಬಸವೇಶ್ವರ ಶಿಕ್ಷಣ ಸಂಸ್ಥೆಯ 24ನೇ ವರ್ಷದ ಶಾಲಾ ವಾರ್ಷಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಚಾಲನೆ ನೀಡಿದರು.

ಮೇಡ ಪ್ರತಿಷ್ಠಾನದ ಟ್ರಸ್ಟಿ ರಮೇಶ್ ಕೆ ಮೇಡ, ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟರಾಮೇಗೌಡ, ಕಾಪ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ - ಉದ್ಯಮಿ ಆರ್.ಗಂಗಾಧರ, ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿ.ಶ್ರೀನಿವಾಸ, ಪ್ರಾಂಶುಪಾಲೆ ರಂಗಲಕ್ಷ್ಮೀ ಶ್ರೀನಿವಾಸ ಮತ್ತಿರರು ಉಪಸ್ಥಿತರಿದ್ದರು.

ಇದನ್ನೂ ಓದಿ: Varthur Santhosh: ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಹಳ್ಳಿಕಾರ್​ ಒಡೆಯ; ವರ್ತೂರು ಕೈ ಹಿಡಿಯಲಿರುವ ಹುಡುಗಿ ಯಾರು?

ಬಳಿಕ ಸಂತೋಷ್ ಹೆಗಡೆ ಅವರು ಮಾತನಾಡಿ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸುಂದರ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ. ಪಠ್ಯದ ಕಲಿಕೆಯ ಜೊತೆ ಜೊತೆಗೆ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು ಅತ್ಯಗತ್ಯ ಎಂದು ಹೇಳಿದರು.

ನಂತರ ಮಾತನಾಡಿದ ವೆಂಕಟರಾಮೇಗೌಡರು, ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ಧಿಗೆ ಶಿಕ್ಷಕರ ಜೊತೆಗೆ ಪೋಷಕರ ಸಹಕಾರ ಅಗತ್ಯ ಎಂದು ವಿವರಿಸಿದರು.

ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯಕ್ಕೆ ಅಗತ್ಯವಿರುವ ನೆರವು ನೀಡುವುದಾಗಿ ಇದೇ ವೇಳೆ ಉದ್ಯಮಿ ಗಂಗಾಧರ ಪ್ರಕಟಿಸಿದರು.

“ಭಾರತ ಉತ್ಸವ” ಶೀರ್ಷಿಕೆಯಡಿ ವಿದ್ಯಾರ್ಥಿಗಳು ನೀಡಿದ ವಿವಿಧ ರಾಜ್ಯಗಳ ನೃತ್ಯ ಪ್ರದರ್ಶನ ಮನ ಮೋಹಕವಾಗಿತ್ತು. ನಾಡು ನುಡಿಯ ಮಹತ್ವ ತಿಳಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು. ಹಾಸ್ಯ ನಾಟಕ, ಪೌರಾಣಿಕ ನಾಟಕ, ದೇಶಭಕ್ತಿ ಗೀತೆಗಳು ಮಾತ್ರವಲ್ಲದೇ ಕೀಬೋರ್ಡ್ ವಾದನ, ಯೋಗ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು.