ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Biklu Shiva murder case: ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಕೊಂಚ ರಿಲೀಫ್‌

Byrathi Basavaraj: ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಶಾಸಕನ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಸೂಚಿಸಿದೆ.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದು, ಇದರಿಂದ ಶಾಸಕ ಬೈರತಿ ಬಸವರಾಜ್‌ಗೆ (Byrathi Basavaraj) ಕೊಂಚ ರಿಲೀಫ್ ಸಿಕ್ಕಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಈ ಆದೇಶ ಹೊರಡಿಸಿದೆ. ಅಲ್ಲದೇ ತನಿಖೆಗೂ ಸಹಕರಿಸುವಂತೆ ಶಾಸಕ ಬೈರತಿ ಬಸವರಾಜ್‌ಗೆ ಸೂಚಿಸಿದೆ.

ಇನ್ನು ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಶಾಸಗ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿ, ಕೊಂಚ ರಿಲೀಫ್ ನೀಡಿದೆ.

ಏನಿದು ಪ್ರಕರಣ?

ಬೆಂಗಳೂರಿನ ಹಲಸೂರು ಕೆರೆ ಬಳಿ ಜುಲೈ 15ರ ರಾತ್ರಿ ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದರು. ಕಿತ್ತಕನೂರು ಬಳಿ ಖರೀದಿಸಿದ್ದ ನಿವೇಶನ ಸಂಬಂಧ ಆರೋಪಿಗಳು ಬಿಕ್ಲು ಶಿವನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದರು. ತಡರಾತ್ರಿ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ 8-9 ಮಂದಿ ಮನೆಯ ಮುಂದೆ ಕಾರಿನ ಬಳಿ ನಿಂತಿದ್ದ ಶಿವಪ್ರಕಾಶ್​ನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ದೂರು ನೀಡಿದ್ದರು.

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಕಾರವಾರ: ಉತ್ತರ ಕನ್ನಡ ಜಿಲ್ಲೆ (Uttara Kannada) ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Krishna Sail) ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ಇದನ್ನೂ ಓದಿ: ED Raid: ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ. 25ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.